ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಯವರ ನಿಧನ : ಸಂಸದ ಕರಡಿ ಸಂಗಣ್ಣ ಸಂತಾಪ

ಕೊಪ್ಪಳ : ರಾಜ್ಯಸಭಾ ಸದಸ್ಯ  ಅಶೋಕ ಗಸ್ತಿಯವರ ನಿಧನರಾದ ಸುದ್ದಿಕೇಳಿ ಅತೀವ ದುಖಃಕರವಾಗಿದೆ. ಅವರು ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸಕ್ರಿಯ ಕಾರ್ಯಕರ್ತರಾಗಿ, ರಾಷ್ಟ್ರೀಯ ಸ್ವಯಂ ಸೇವಕರಾಗಿ, ಭಾರತೀಯ ಜನತಾ ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ, ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿರ್ವಹಿಸಿ, ಇತ್ತಿಚ್ಚಿಗೆ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾಗಿದ್ದರು.

ರಾಜ್ಯ ಸಭಾ ಸದಸ್ಯರಾದ ಅಶೋಕ ಗಸ್ತಿಯವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ಅಗಲಿಕೆಯ ದುಖಃವನ್ನು ಭರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು  ಸಂಸದ ಸಂಗಣ್ಣ ಕರಡಿ ಸಂತಾಪ ವ್ಯಕ್ತಪಡಿಸಿದ್ದಾರೆ

Please follow and like us:
error