ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ’- ವರ್ಚುವಲ್ ವೇದಿಕೆ ಮೂಲಕ ಕೊಪ್ಪಳದಲ್ಲಿ ನೇರಪ್ರಸಾರ ವೀಕ್ಷಣೆ


ಕೊಪ್ಪಳ  : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಯಶಸ್ವಿಯಾಗಿ ಪೂರ್ಣಗೊಳಿಸಿರುವ  ಸಂದರ್ಭದಲ್ಲಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ “ಜನಸ್ನೇಹಿ ಆಡಳಿತ ಒಂದು ವರ್ಷ; ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮದ ನೇರಪ್ರಸಾರವನ್ನು ವರ್ಚುವಲ್ ವೇದಿಕೆ ಮುಖಾಂತರ ಕೊಪ್ಪಳದಲ್ಲಿ ವೀಕ್ಷಣೆ ಮಾಡಲಾಯಿತು.
ಈ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಸೋಮವಾರದಂದು (ಜುಲೈ. 27) ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಕರ್ನಾಟಕ ಸರ್ಕಾರವು ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಾಧನೆಯ ಕಿರುಪುಸ್ತಕ “ಸವಾಲುಗಳ ಒಂದು ವರ್ಷ; ಪರಿಹಾರದ ಸ್ಪರ್ಶ” ಹಾಗೂ ಜನಪದ, ಮಾರ್ಚ್ ಆಫ್ ಕರ್ನಾಟಕ ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊAದಿಗೆ ನೇರ ಸಂವಾದದಲ್ಲಿ ಮಾತನಾಡಿದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಟಕ್ಕಳಕಿ ಗ್ರಾಮದ ರೈತ ಶಿವನಗೌಡ ಪಾಟೀಲ್, ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ನಮ್ಮ ಹೊಲದಲ್ಲಿ ಬದು ನಿರ್ಮಾಣ ಮಾಡಿಕೊಂಡಿದ್ದೇವೆ.  ಈ ಅವಧಿಯಲ್ಲಿ ನಮ್ಮ ಗ್ರಾಮದ ಏಳು ಕುಟುಂಬಗಳು 16 ದಿನಗಳ ಕಾಲ ಕೆಲಸ ಮಾಡಿದ್ದು, ಪ್ರತಿ ಸದಸ್ಯರ ಖಾತೆಗೆ 4400 ರೂ.ಗಳು ಜಮಾ ಆಗಿದೆ.  ಲಾಕ್‌ಡೌನ್ ಸಮಯದಲ್ಲಿ ಮೊಬೈಲ್ ಎ.ಟಿ.ಎಂ. ಮೂಲಕ ಮನೆ ಬಾಗಿಲಲ್ಲೇ ಹಣ ಪಡೆದಿದ್ದೇವೆ. ಇದರಿಂದ ನಮ್ಮ ಗ್ರಾಮದ ಕುಟುಂಬಗಳಿಗೆ ಆರ್ಥಿಕವಾಗಿ ನೆರವಾಗಿದೆ ಎಂದ ಅವರು, ರಾಜ್ಯದ ಹಾಗೂ ನಮ್ಮ ಕೊಪ್ಪಳ ಜಿಲ್ಲೆಯ ಸಮಸ್ತ ರೈತರ ಪರವಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದರು.  ಮುಖ್ಯಮಂತ್ರಿಗಳು ಮಾತನಾಡಿ, ನಾನು ಕೊಪ್ಪಳ ಜಿಲ್ಲೆಗೆ ಬಂದಾಗ ಭೇಟಿ ಮಾಡುವುದಾಗಿ ಸಾವಯವ ಕೃಷಿಕ ಶಿವನಗೌಡ ಪಾಟೀಲ್‌ರವರಿಗೆ ಹೇಳಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಯಲಬುರ್ಗಾ ಶಾಸಕ ಹಾಲಪ್ಪ ಬಸಪ್ಪ ಆಚಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ತಸಶೀಲ್ದಾರ ಜೆ.ಬಿ. ಮಜ್ಜಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣ ಮೂರ್ತಿ ದೇಸಾಯಿ, ಜಿಲ್ಲಾ ವಾರ್ತಾಧಿಕಾರಿ ಜಿ.ಸುರೇಶ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳಿಂದ ಸರ್ಕಾರದ ಸೌಲಭ್ಯ ಪಡೆದ ಫಲಾನುಭವಿಗಳು ಉಪಸ್ಥಿತರಿದ್ದರು.

Please follow and like us:
error