ರಾತ್ರಿ ಕರ್ಫ್ಯೂ ನಾಳೆ (24)ರಿಂದ ಜನೇವರಿ 1ರವರೆಗೆ ಜಾರಿ-ಸಿಎಂ

 

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ಹೇಳಿದ್ದಾರೆ.

Please follow and like us:
error