ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲು ಡಿಸಿಗೆ ಪತ್ರ ಬರೆದ ಹೆಚ್ಡಿಕೆ

ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಹರಡುವಿಕೆ ತಡೆಗಟ್ಟಲು ದಿನಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ ಲಾಕ್ಡೌನ್ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ‍ ಪತ್ರ ಬರೆದಿದ್ದಾರೆ.

ರಾಮನಗರ-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೋವಿಡ್ 19  ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ  ಹೆಚ್ಚಾಗುತ್ತಿದ್ದು ಸಮುದಾಯಕ್ಕೆ ಹರಡುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಿಗ್ಗೆ  7 ಗಂಟೆಯಿಂದೆ 11 ಗಂಟೆಯವರೆಗೆ ಸಾರ್ವಜನಿಕರ ಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿ 11 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ  ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಿ ಅಂಗಡಿ ಮುಂಗಟ್ಟು ಹಾಗೂ ಸಾರ್ವಜನಿಕ ಸಂಪರ್ಕ ವ್ಯವಸ್ಥೇಯನ್ನು ತಡೆಗಟ್ಟಲು ಸಂಪೂರ್ಣವಾಗಿ ಲಾಕ್ ಡೌನ್ ಜಾರಿಗೊಳಿಸಲು ಕೋರುತ್ತೇನೆ ಎಂದು ಪತ್ರ ಬರೆದಿದ್ದಾರೆ

Please follow and like us:
error