ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳು : ಕೇಂದ್ರ,ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು ; ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರ ಇಂದು ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ  ಪ್ರತಿಭಟನೆ ನಡೆಸಿದರು.

 

ಒಂದೆಡೆ ದೇಶದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದು ಎಪಿಎಂಸಿ ಗಳನ್ನು ಮುಚ್ಚಲು ಸಕಾಲ ಎನ್ನುತ್ತಾರೆ, ಇನ್ನೊಂದೆಡೆ ನರೇಂದ್ರ ಮೋದಿಯವರು ಎಪಿಎಂಸಿ ಗಳನ್ನು ಮುಚ್ಚಲ್ಲ, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮುಂದೆಯೂ ಸಿಗುತ್ತೆ ಅಂತಾರೆ. ಇವರಿಬ್ಬರಲ್ಲಿ ಯಾರು ಸತ್ಯ ಹೇಳ್ತಿದ್ದಾರೆ? ಯಾರು ಸುಳ್ಳು ಹೇಳ್ತಿದ್ದಾರೆ?  ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸರ್ಕಾರ ಜಾರಿಗೊಳಿಸುವ ಕಾನೂನುಗಳು, ನೀತಿ ನಿಯಮಗಳು ಸಕಾರಾತ್ಮಕ ಬದಲಾವಣೆ ತರುವಂತಿರಬೇಕೇ ಹೊರತು ಸರ್ವನಾಶಕ್ಕೆ ದಾರಿಮಾಡಿಕೊಂಡುವಂತೆ ಇರಬಾರದು. ರೈತರೇ ತಮಗೆ ಈ ಮಸೂದೆ ಬೇಡವೆಂದರೂ, ಏನಾದರೂ ಆಗಲಿ ಮಸೂದೆ ಜಾರಿ ಮಾಡಿಯೇ ತೀರುತ್ತೇವೆ ಎಂದು ಹೊರಟಿರಲು ಕಾರಣವೇನು? ಬಿಜೆಪಿ ನಾಯಕರಿಗೆ ರೈತರ ಬಗ್ಗೆ ನೈಜ ಕಾಳಜಿಯಿದೆಯೇ?

ಕೃಷಿಗೆ ಮಾರಕವಾದ ಮಸೂದೆಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನಿರಂತವಾಗಿ ಇರಲಿದೆ. ರೈತರ ಪಾಲಿಗೆ ಮರಣ ಶಾಸನವಾದ ಕಾನೂನುಗಳು ಜಾರಿಯಾಗದಂತೆ ತಡೆಯಲು ಸದನದ ಒಳಗೆ ಮತ್ತು ಹೊರಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ  ಹಿರಿಯ ನಾಯಕರಾದ ಡಾ.ಜಿ. ಪರಮೇಶ್ವರ, ಎಸ್.ಆರ್. ಪಾಟೀಲ್, ಬಿ.ಕೆ. ಹರಿಪ್ರಸಾದ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮತ್ತಿತರರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

Please follow and like us:
error