ರೈತರ ಸಂಪೂರ್ಣ ಸಾಲ ಮನ್ನಾ ಇಲ್ಲ: ಸಿಎಂ ಯಡಿಯೂರಪ್ಪ

ಬೆಳಗಾವಿ: ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಅಲ್ಲದೆ, ಭಾರೀ ಮಳೆಯಿಂದ ದೊಡ್ಡ ಅನಾಹುತವೇ ಆಗಿದೆ. ಸಾವಿರಾರು ಜನರಿಗೆ ತೊಂದರೆಯಾಗಿದೆ. ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ, ಹಣವನ್ನು ಪರಿಹಾರ ಕಾರ್ಯಗಳಿಗೆ ಬಳಸಿಕೊಳ್ಳುವ ಪರಿಸ್ಥಿತಿ ಬಂದಿದೆ’ ಎಂದರು.

‘ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ. ಉಪಚುನಾವಣೆ ನಂತರವೇ ಇದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅವರು ಈ ಸಂದರ್ಭ ಹೇಳಿದರು.

Please follow and like us:
error