ರೈಲ್ವೆ ಸ್ವಯಂಚಾಲಿತ ಮೆಟ್ಟಿಲುಗಳ ಶಿಲಾನ್ಯಾಸ

ಕೊಪ್ಪಳ, ಮಾ.08: ನಗರದ ಬಹುದಿನಗಳ ಬೇಡಿಕೆಯಾದ ಕೊಪ್ಪಳ ರೈಲ್ವೆ ನಿಲ್ದಾಣದ ಸ್ವಯಂಚಾಲಿತ ಮೆಟ್ಟಿಲುಗಳ ನಿರ್ಮಾಣಕ್ಕಾಗಿ ಕೇಂದ್ರ ರೈಲ್ವೆ ಮಂತ್ರಿಗಳಾದ ಪಿಯೂಷ್ ಗೋಯಲ್ ಅವರಲ್ಲಿ ಇತ್ತೀಚೆಗೆ ಮನವಿಯನ್ನು ಸಲ್ಲಿಸಿ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ಯೋಜನೆಯ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾದ ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ದಿನಾಂಕ: 09/03/19 ಶನಿವಾರದಂದು ಬೆಳಿಗ್ಗೆ: 10:30 ಗಂಟೆಗೆ ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಸ್ವಯಂ ಚಾಲಿತ ಮೆಟ್ಟಿಲು (ಎಸ್ಕಲೇಟರ್) ಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೆರಿಸಲಿದ್ದಾರೆ. ಈ ಯೋಜನೆಯಿಂದ ಜಿಲ್ಲೆಯ ಹಿರಿಯ ನಾಗರಿಕರಿಗೆ, ಅಂಗವಿಕಲರಿಗೆ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಪ್ರಯಾಣದ ಸಮಯದಲ್ಲಿ ಅನುಕೂಲವಾಗಲಿದೆ ಎಂದು ಅವರು ಅಭಿಮತ ವ್ಯಕ್ತಪಡಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳು  ಕಾರ್ಯಕರ್ತರು ಆಗಮಿಸಬೇಕು ಎಂದು ಬಿಜೆಪಿ ಕೊಪ್ಪಳ ಲೋಕಸಭಾ ಕ್ಷೇತ್ರದ ಮಾಧ್ಯಮ ಸಂಚಾಲಕ ಬಿ. ಗಿರೀಶಾನಂದ ಜ್ಞಾನಸುಂದರ ತಿಳಿಸಿದ್ದಾರೆ.

Please follow and like us:
error