fbpx

‘ಲವ್ ಜಿಹಾದ್’ ತಡೆಗೆ ಕಾನೂನು ಮುಖ್ಯಮಂತ್ರಿ ಘೋಷಣೆ : ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನ-ಸಿದ್ದರಾಮಯ್ಯ ಟೀಕೆ

‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ  ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು

‘ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ?

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ.

ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು.

Please follow and like us:
error
error: Content is protected !!