ಲಾಕ್‌ಡೌನ್ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸಿ:ರಾಜ್ಯಗಳಿಗೆ ಕೇಂದ್ರ ಸೂಚನೆ

ಹೊಸದಿಲ್ಲಿ, : ಲಾಕ್‌ಡೌನ್ ಕಡ್ಡಾಯವಾಗಿ ಜಾರಿಗೆ ತರಬೇಕು. ಲಾಕ್‌ಡೌನ್ ನಿರ್ಬಂಧವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಕೇಂದ್ರ ಸರಕಾರ ಇಂದು ಎಲ್ಲ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.

400ಕ್ಕೂ ಅಧಿಕ ಜನರಿಗೆ ಹಬ್ಬಿರುವ ಕೊರೋನ ವೈರಸ್‌ನ್ನು ತಡೆಗಟ್ಟಲು ದೇಶಾದ್ಯಂತ 80 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಿಸಲಾಗಿರುವ ಮರುದಿನ ಕೇಂದ್ರ ಸರಕಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಕರೆ ನೀಡಿದೆ.

ಹೆಚ್ಚಿನ ಜನರು ಲಾಕ್‌ಡೌನ್‌ನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದರು. ಜನತೆ ಆದೇಶವನ್ನು ಪಾಲಿಸುವುದನ್ನು ಆಯಾ ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು ಎಂದಿದ್ದರು.

Please follow and like us:
error

Related posts