fbpx

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ ಮೇ 7ರವರೆಗೆ ವಿಸ್ತರಣೆ: ಸಿಎಂ

ಬೆಂಗಳೂರು, ಮೇ 4: ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು  ಎರಡು ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳವಾರ(ಮೇ 5) ಈ ಸೌಲಭ್ಯ ಕೊನೆಗೊಳುವುದಿತ್ತು. ಆದರೆ, ವಲಸೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರ(ಮೇ 7) ದವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.

 ಕಾರ್ಮಿಕರು ಮತ್ತು ಇತರ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರವಿವಾರ 951 ಕೆಎಸ್ಸಾರ್ಟಿಸಿ ಬಸ್ ಗಳನ್ನು ಒದಗಿಸಲಾಗಿದ್ದು ಅಂದಾಜು 30 ಸಾವಿರ  ಜನರು ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಸೋಮವಾರ ಈಗಾಗಲೇ 50 ಬಸ್ ಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್ ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್ ಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶನಿವಾರ 550 ಬಸ್ ಗಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ. ರವಿವಾರ  (ಮೇ 3) ಎರಡು ರೈಲುಗಳು ಬಿಹಾರದ ಪಾಟ್ನಾ, ಒಂದು ಜಾರ್ಖಂಡ್ ನ ರಾಂಚಿಗೆ ತೆರಳಿವೆ. ಇದೇ ಸಮಯ ಒಡಿಶಾದ ಭುವನೇಶ್ವರಕ್ಕೆ ಒಂದು ರೈಲು ಸೇರಿದಂತೆ ಒಟ್ಟು ನಾಲ್ಕು ರೈಲುಗಳು 4,800 ಪ್ರಯಾಣಿಕರನ್ನು ಆ ರಾಜ್ಯಗಳಿಗೆ ಕರೆದೊಯ್ದಿದೆ.

ಸೋಮವಾರ (ಮೇ 4) ಎರಡು ರೈಲುಗಳು ರಾಜಸ್ಥಾನದ ಜೈಪುರ ಮತ್ತು ಬಿಹಾರದ ಪಾಟ್ನಾಕ್ಕೆ ಹೊರಡಲಿವೆ. ಪ್ರಯಾಣಕ್ಕಿಂತ ಮೊದಲು ಎಲ್ಲ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Please follow and like us:
error
error: Content is protected !!