ವಿದ್ಯುತ್ ಮಗ್ಗ ನೇಕಾರರಿಂದ ಅರ್ಜಿ ಆಹ್ವಾನ


ಕೊಪ್ಪಳ, : ಪ್ರಸಕ್ತ ಸಾಲಿಗಾಗಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ 2 ವಿದ್ಯುತ್‌ಮಗ್ಗ ಯೋಜನೆಯಡಿ ವಿದ್ಯುತ್ ಮಗ್ಗ ಚಟುವಟಿಕೆ ಕೈಗೊಳ್ಳುವ ಉದ್ದೇಶವಿರುವ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಘಟಕ ವೆಚ್ಚ ರೂ. 3 ಲಕ್ಷಗಳಾಗಿದ್ದು, ಈ ಮೊತ್ತವನ್ನು ಹಣಕಾಸು ಸಂಸ್ಥೆಗಳಿAದ (ಬ್ಯಾಂಕ್) ಸಾಲ ಪಡೆದು ಯಂತ್ರೋಪಕರಣಗಳನ್ನು ಅಳವಡಿಸಿ ಉತ್ಪಾದನೆ ಪ್ರಾರಂಭಿಸಿದ ನಂತರ ಅರ್ಜಿ ಸಲ್ಲಿಸಬಹುದಾಗಿದೆ.
ಸಾಮಾನ್ಯ ವರ್ಗದವರಿಗೆ ಶೇ.50 ರಷ್ಟು ಹಾಗೂ ಪರಿಶಿಷ್ಟ ಜಾತಿ/ಪಂಗಡದವರಿಗೆ ಶೇ.90 ರಷ್ಟು ಸಹಾಯಧನವನ್ನು ಸಂಬAಧಪಟ್ಟ ಸಾಲ ನೀಡಿದ ಬ್ಯಾಂಕುಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಲಾಗುವುದು. ಈಗಾಗಲೇ ಈ ಕುರಿತು ಅಕ್ಟೋಬರ್ ಮಾಹೆಯಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಸಾಕಷ್ಟು ಪ್ರಮಾಣದಲ್ಲಿ ಅರ್ಜಿಗಳು ಬಂದಿರುವುದಿಲ್ಲ. ಕಾರಣ ವಿದ್ಯುತ್ ಮಗ್ಗ ಚಟುವಟಿಕೆ ನಡೆಸಲು ಆಸಕ್ತಿವುಳ್ಳ ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳಲು ಮತ್ತೊಮ್ಮೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ, ದೂರವಾಣಿ ಸಂಖ್ಯೆ:08539-230069ಯನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Please follow and like us:
error