ವಿದ್ಯುತ್ ಸ್ಪರ್ಶಕ್ಕೆ ಯುವಕ ಬಲಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ವಿದ್ಯುತ್ ಕೈ ಕೊಟ್ಟಾಗ ಸರಿಪಡಿಸಲು ಮನೆ ಎದುರಿಗಿದ್ದ ಕರೆಂಟ್ ಕಂಬ ಚೆಕ್ ಮಾಡುತ್ತಿದ್ದ ವೇಳೆ ಶಾಕ್ ಹೊಡೆದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು ಗಣೇಶ್ ಗಡಾದ (35) ಎಂದು ಗುರುತಿಸಲಾಗಿದೆ. ಗಣೇಶ್ ಗ್ರಾಮದಲ್ಲಿ ಮೋಟಾರ್ ರಿಪೇರಿ ಕೆಲಸ ಮಾಡುತ್ತಿದ್ದ. ಈಚೆಗಷ್ಟೇ ಗ್ರಾಮದಲ್ಲಿ ಯಾರದಾದರೂ ಮನೆಯಲ್ಲಿ ಕರೆಂಟ್ ಕೈ ಕೊಟ್ಟರೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದ. ಕರೆಂಟ್ ಕೆಲಸದಲ್ಲೇ ಗಣೇಶ್ ಸಾವಿಗೀಡಾಗಿದ್ದಾನೆ. ತಕ್ಷಣವೇ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆರೋಗ್ಯ ಇಲಾಖೆ ಸಿಬ್ಬಂದಿ ಇರಲಿಲ್ಲ. ಹಾಗಾಗಿ ಆಸ್ಪತ್ರೆಯಲ್ಲಿ ಕೆಲ ಕಾಲ ಉದ್ವಿಘ್ನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಸ್ಥರು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕುಷ್ಟಗಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Please follow and like us:
error