ವಿಧಾನ ಪರಿಷತ್‌  ಕೋಲಾಹಲ: ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿದ ಸಭಾಪತಿ

 

 

ಬೆಂಗಳೂರು, : ಇಂದು ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಗದ್ದಲ, ಕೋಲಾಹಲ ನಡೆದಿದ್ದು, ಕಲಾಪವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದರು.

 

 

ವಿಶೇಷ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಆಸನದಲ್ಲಿ ಉಪ ಸಭಾಪತಿ ಧರ್ಮೆಗೌಡ ಆಸೀನರಾಗಿದ್ದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದರು. ಈ ವೇಳೆ ಪೀಠದ ಮುಂದೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರು ಜಮಾಯಿಸಿದರು. ಈ ವಿಚಾರವಾಗಿ ಗದ್ದಲ ಏರ್ಪಟ್ಟು ಉಪ ಸಭಾಪತಿಯನ್ನು ಕಾಂಗ್ರೆಸ್ ಸದಸ್ಯರು ಪೀಠದಿಂದ ಬಲವಂತವಾಗಿ ಕೆಳಗಿಳಿಸಿದರು. ಅಲ್ಲದೆ ಕಾಂಗ್ರೆಸ್ ಸದಸ್ಯ ಚಂದ್ರಶೇಖರ್ ಪಾಟೀಲ್ ಅವರನ್ನು ಬಲವಂತವಾಗಿ ಪೀಠದಲ್ಲಿ ಕೂರಿಸಿದರು.  ಒಂದು ಹಂತದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿದ್ದಾರೆ.

ಈ ನಡುವೆ ಸದನಕ್ಕೆ ಆಗಮಿಸಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

 

Please follow and like us:
error