ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು- ಮಾಜಿ ಸಿಎಂ‌ ಸಿದ್ದರಾಮಯ್ಯ ಟ್ವೀಟ್

ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ,ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ. ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ.ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ

ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ.
ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ,
ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು.

ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ @narendramodi, @rajnathsingh ಇಲ್ಲಿಯ ವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು.

Please follow and like us:
error