ವೇದಿಕೆಯಲ್ಲಿಯೇ ಕುಸಿದು ಬಿದ್ದ ಬಿಜೆಪಿ ನಾಯಕಿ

ಒಂದು ದಿನದಲ್ಲಿ ತನ್ನ 5 ನೇ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಬಿಜೆಪಿಯ ಪಂಕಜಾ ಮುಂಡೆ ವೇದಿಕೆಯಲ್ಲಿ ಕುಸಿದುಬಿದ್ದಿದ್ದಾರೆ  ಬೀಡ್ ಜಿಲ್ಲೆಯ ಪಾರ್ಲಿಯಲ್ಲಿ ಶನಿವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ಮಹಾರಾಷ್ಟ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಪಂಕಜಾ ಮುಂಡೆ ಅವರು ವೇದಿಕೆಯಲ್ಲಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.

ಅಕ್ಟೋಬರ್ 21 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಾರ್ಲಿ ಕ್ಷೇತ್ರದಿಂದ ಮುಂಡೆ ಅವರ ಸೋದರಸಂಬಂಧಿ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಪ್ರಚಾರದ ಕೊನೆಯ ದಿನದಂದು ಪಟ್ಟಣದಲ್ಲಿ ನಡೆದ ತನ್ನ ಐದನೇ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡುವಾಗ ಕುಸಿದುಬಿದ್ದರು.

 

Please follow and like us:
error