‘ಶಬ್ದಬ್ರಹ್ಮ’ ನಿಗೆ CM ಬಿಎಸ್ ವೈ, ಸಿದ್ದರಾಮಯ್ಯ, ಹೆಚ್ಡಿಕೆ ನುಡಿನಮನ

ಕನ್ನಡನೆಟ್ ನ್ಯೂಸ್ : ಹಿರಿಯ ವಿದ್ವಾಂಸರು, ನಿಘಂಟು ತಜ್ಞ, ಶತಾಯುಷಿ, ನಾಡೋಜ, ಪದ್ಮಶ್ರೀ ಪ್ರೊ ಜಿ.ವೆಂಕಟಸುಬ್ಬಯ್ಯರವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಭಾಷಾ ತಜ್ಞರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಶಿಕ್ಷಕರಾಗಿ ಕನ್ನಡಕ್ಕೆ ಅಪಾರ ಸೇವೆ ಸಲ್ಲಿಸಿರುವ ಆ ಅಕ್ಷರ ತಪಸ್ವಿಗಳ ನಿಧನದಿಂದ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ ಸಾಹಿತ್ಯ ಕ್ಷೇತ್ರದಲ್ಲಿ ಅವರ ಅಪೂರ್ವ ಸಾಧನೆಗಳು ಕನ್ನಡಿಗರ ಪಾಲಿಗೆ ಚಿರಸ್ಥಾಯಿಯಾಗಿದೆ. ಪ್ರೊ ವೆಂಕಟಸುಬ್ಬಯ್ಯನವರ ಪಾದಗಳಿಗೆ ಅಂತಿಮ ನಮನಗಳನ್ನು ಸಲ್ಲಿಸುತ್ತಾ, ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

‘ಶಬ್ದಬ್ರಹ್ಮ’ನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನ ಕನ್ನಡ ಸಾರಸ್ವರ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ‌ಕೋರುವೆ. ಪ್ರೊ.ಜಿ.ವೆಂಕಟುಸುಬ್ಬಯ್ಯ ಅವರ ಕುಟುಂಬ ಮತ್ತು‌‌ ಸಮಸ್ತ‌ ಕನ್ನಡಿಗರ ಶೋಕದಲ್ಲಿ‌ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕನನ್ನು ರಾಜ್ಯ ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವಿಟರ್ ನಲ್ಲಿ ಸಂತಾಪಗಳನ್ನು ಸೂಚಿಸಿದ್ದಾರೆ.

Please follow and like us:
error