ಶಾಂತಿ ಕಾಪಾಡಲು ಮುಖ್ಯಮಂತ್ರಿ ಮನವಿ

ಬೆಂಗಳೂರು, ಡಿ.19: ಯಾವುದೇ  ಕಾರಣಕ್ಕೂ ಶಾಂತಿ ಕದಡದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ನಾಡಿನ ಜನತೆಯಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

ಎಲ್ಲರು ಶಾಂತಿ ಕಾಪಾಡಿ ಮತ್ತು ಜನರ ಆಶಯಗಳಿಗೆ ಧಕ್ಕೆ ತರಬೇಡಿ ಎಂದು ಮುಖ್ಯಮಂತ್ರಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ನಾಯಕರಿಗೆ ಮನವಿ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಕಾನೂನು. ಇದರಿಂದ ದೇಶದ ಪ್ರಜೆಗಳಿಗೆ ಯಾವುದೇ ತೊಂದರೆ ಇಲ್ಲ ಮತ್ತು ಆತಂಕಕ್ಕೆ ಒಳಪಡುವ ಅವಶ್ಯಕತೆ ಇಲ್ಲ. ದೇಶದ ನಾಗಕರಿಗೆ ಇದರಿಂದ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.

ಪೌರತ್ವ ಕಾಯ್ದೆ ಜನರನ್ನು ಅವರ ರಾಷ್ಟ್ರೀಯತೆ ಆಧಾರದ ಮೇಲೆ ಗುರುತಿಸುತ್ತದೆ ವಿನಃ. ಅವರ ಜಾತಿ ಪಂಥ ಧರ್ಮದ ಮೇಲೆ ಅಲ್ಲ. ಇದು ರಾಷ್ಟ್ರೀಯ ಕಾಯ್ದೆ. ದೇಶದ ಎಲ್ಲಾ ರಾಜ್ಯಗಳು, ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದು ಕಾಯ್ದೆ ತಾನಾಗಿಯೇ ಅನ್ವಯವಾಗುತ್ತದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಲಾಠಿಚಾರ್ಜ್ ಮಾಡದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಎದುರುವ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಬೀಸಿದ್ದರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಯಾರ ಮೇಲೂ ಪೊಲೀಸರು ಲಾಠಿ ಚಾರ್ಜ್ ಮಾಡಬಾರದು. ಒಂದು ವೇಳೆ ಮಾಡಿದ್ದು ಕಂಡುಬಂದರೆ ಅಂಥವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Please follow and like us:
error