ಶಿಕ್ಷಕರ ವರ್ಗಾವಣೆಗೆ ಸುಗ್ರಿವಾಜ್ಞೇ: ಸರ್ಕಾರದ ಕ್ರಮಕ್ಕೆ ಶಂಭುಲಿಂಗನಗೌಡ ಪಾಟೀಲ ಸ್ವಾಗತ

 

Kannadanet NEWS  ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ತಿದ್ದುಪಡಿಗರ ಸುಗ್ರಿವಾಜ್ಞೇ ಜಾರಿಗೆ ತರಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸೋಮವಾರ ನೆಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಅವರು ಸ್ವಾಗತಿಸಿದ್ದಾರೆ.

ಈ ಬಗ್ಗೆ ಸಂಘದ ರಾಜ್ಯಾ ಘಟಕದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಅವರು ಪ್ರಕಟಣೆ ನಿಡಿದ್ದು ಇದೇ 19 ರಂದು ಶಿಕ್ಷಣ ಸಚಿವ ಸುರೇಶಕುಮಾರ ಅವರು ನೀಡಿದ್ದ ಭರವಸೆಯನ್ನು ಈಡೇರಿಸಿದ್ದು, ಶೀಘ್ರವೇ ಸುಗ್ರಿವಾಜ್ಞೆಯನ್ನು ರಾಜ್ಯಪಾಲರಿಗೆ ಕಳುಹಿಸಿ ಅನುಮೋದನೆ ಪಡೆದು ಶೀಘ್ರವೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಿ ಬೇಸಿಗೆ ರಜೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ಮಾಡಬೇಕು ಎಂದು ಶಂಭುಲಿಂಗನಗೌಡ ಪಾಟೀಲ ಅವರು ಮನವಿ ಮಾಡಿದ್ದಾರೆ.

ಬಹಳ ದಿನಗಳಿಂದ ನನೆಗುದಿಗೆ ಬಿದ್ದದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಸಂಘ ಸರ್ಕಾರ ಸಚಿವರು ಅಧಿಕಾರಿಗಳ ಮೇಲೆ ನಿರಂತರ ಒತ್ತಡ ಹೇರುತ್ತಾ ವರ್ಗಾವಣೆ ಪ್ರಕ್ರಿಯೆ ನೆಡೆಸುವಂತೆ ಆಗ್ರಹಿಸುತ್ತಾ ಬಂದಿತ್ತು. ರಾಜ್ಯಪಾಲರ ಅನುಮೋದನೆಯು ಶೀಘ್ರವೇ ಆಗುವಂತೆ ಸರ್ಕಾರ ಕ್ರಮ ಕೈ ಕೊಳ್ಳಬೇಕು.
ವರ್ಗಾವಣೆ ಪ್ರಕ್ರಿಯೆಯ ಸುಗ್ರಿವಾಜ್ಞೆ ಹೊರಡಿಸಿ ವರ್ಗಾವಣೆಗೆ ಅಧಿಸೂಚಿಸಿದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ವರ್ಗಾವಣೆ ಪ್ರಕ್ರಿಯೆ ಇದರಿಂದ ಸುಲಲಿತವಾಗಲಿದೆ‌ ಸಮಾರು 72 ಸಾವಿರ ಶಿಕ್ಷಕರು ವರ್ಗಾವಣೆಗೆ ಆಕಾಂಕ್ಷಿಗಳಾಗಿದ್ದರು ಎಂದು ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಅವರು ಹೇಳಿದ್ದಾರೆ.

ಸುಗ್ರಿವಾಜ್ಞೆ ಪ್ರಕ್ರಿಯೆ ನಡೆಸಲು ಕಾರಣರಾದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೂ ಶಿಕ್ಷಣ ಸಚಿವ ಎಸ್ ಸುರೇಶಕುಮಾರ ಹಾಗೂ ಸಚಿವ ಸಂಪುಟದ ಎಲ್ಲ ಸಚಿವರಿಗೆ ಹಾಗು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಹಾಗೂ ಪದಾಧಿಕಾರಿಗಳಿಗೆ ಸಮಸ್ತ ಶಿಕ್ಷಕ ಸಮುದಾಯದ ಪರವಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ಅವರು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

Please follow and like us:
error