ಶಿವರಾಜ ತಂಗಡಗಿ ಅವರು ತಮ್ಮ ವೃತ್ತಿ ನೆನಪು ಮಾಡಿಕೊಂಡಿದ್ದಾರೆ : ಭೈರತಿ ಬಸವರಾಜ

ಯುಜಿಡಿ ಮತ್ತು ಕುಡಿವ ನೀರಿನ ಕಾಮಗಾರಿ 2 ತಿಂಗಳಿನಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸುಮಾರು‌ 6 ಕೋಟಿ ಹಣ ಇದೆ ನಿವೇಶನ ರಚನೆಗೆ ಟೆಂಡರ್ ಕರೆಯಲಾಗಿದೆ ನಗರಾಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ನಿವೇಶನದಲ್ಲಿ ಶೇ.5ರಷ್ಟು ಪತ್ರಕರ್ತರಿಗೆ ಮೀಸಲು ಇಡ್ತಿವಿ .. ಮಂತ್ರಿಗಳು ವಸೂಲಿ ಮಾಡಲು ಜಿಲ್ಲೆಗೆ ಬರುತ್ತಿದ್ದಾರೆ ಎಂಬ ಶಿವರಾಜ ತಂಗಡಗಿ ಹೇಳಿಕೆ ವಿಚಾರ ಬಿ.ಸಿ.ಪಾಟೀಲ್ ಅವರಿಗೆ ಕೇವಲ ಅಭಿವೃದ್ಧಿ ಮಾತ್ರ ಗೊತ್ತು ಬೇರೇನು ಗೊತ್ತಿಲ್ಲ ಶಿವರಾಜ ತಂಗಡಗಿ ಅವರು ತಮ್ಮ ವೃತ್ತಿ ನೆನಪು ಮಾಡಿಕೊಂಡಿದ್ದಾರೆ ಕೊಪ್ಪಳದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿಕೆ

ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಇಲ್ಲದಿದ್ದರೆ ಕಾನೂನು ಕ್ರಮ
ಕೊಪ್ಪಳ   ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ, ಬಡಾವಣೆ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ವಿಳಂಬವಿಲ್ಲದೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು ಇಲ್ಲದಿದ್ದರೆ ಸಂಬAಧಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಸಚಿವ ಭೈರತಿ ಎ. ಬಸವರಾಜ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಇಂದು ನಗರಾಭಿವೃದ್ಧಿ ಪ್ರಾಧಿಕಾರ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಯಾವುದೇ ತೊಂದರೆ ಇಲ್ಲ. ಆದರೆ ಒಳಚರಂಡಿ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಜೊತೆಗೆ ಸಮಯವೂ ವ್ಯರ್ಥವಾಗುತ್ತಿದೆ. ಆದ್ದರಿಂದ ಇನ್ನು ಒಂದು ತಿಂಗಳೊಳಗೆ ಇದುವರೆಗಿನ ಕಾಮಗಾರಿ ಪ್ರಗತಿಯ ವರದಿಯೊಂದಿಗೆ ಬಾಕಿ ಉಳಿದ ಕಾಮಗಾರಿಯ ಅಂದಾಜು ವೆಚ್ಚದ ಡಿಪಿಆರ್ ಅನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಹಾಗೆಯೇ ಅಮೃತ್ ಯೋಜನೆಯಡಿ ಗಂಗಾವತಿಯ ತಾಲ್ಲೂಕಿನಲ್ಲಿನ ಓವರ್ ಹೆಡ್ ಟ್ಯಾಂಕ್‌ಗಳ ನಿರ್ಮಾಣವನ್ನು ಆಗಸ್ಟ್ ತಿಂಗಳ ಕೊನೆಗೆ ಪೂರ್ಣಗೊಳಿಸಬೇಕು. ಆಗಸ್ಟ್ನಲ್ಲಿ ನಾನು ವಿಶೇಷವಾಗಿ ಗಂಗಾವತಿಗೆ ಭೇಟಿ ನೀಡುತ್ತೇನೆ. ಅಷ್ಟರೊಳಗೆ ಕುಡಿಯುವ ನೀರು ಮತ್ತು ಒಳ ಚರಂಡಿಗೆ ಸಂಬAಧಿಸಿದ ಎಲ್ಲ ಕಾಮಗಾರಿಗಳು ಪೂರ್ಣಗೊಂಡಿರಬೇಕು. ಇಲ್ಲವಾದರೆ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೊಪ್ಪಳ ನಗರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಡಿ ಬರುವ ಬಡಾವಣೆಗಳ ಅಭಿವೃದ್ಧಿಗೆ ಮೊದಲು ಆದ್ಯತೆ ಕೊಡಿ. ನಂತರದಲ್ಲಿ ಖಾಸಗಿ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡಿ. ಪ್ರಾಧಿಕಾರದ ಬಡಾವಣೆಗಳಲ್ಲಿನ ನಿವೇಶನಗಳನ್ನು ಹಂಚಿಕೆ ಮಾಡುವುದರ ಮೂಲಕ ಪ್ರಾಧಿಕಾರಕ್ಕೆ ಸಂಪನ್ಮೂಲ ಕ್ರೋಢೀಕರಣಕ್ಕೆ ಪ್ರಯತ್ನಿಸಿ. ಪ್ರಾಧಿಕಾರದಲ್ಲಿನ ಆರ್ಥಿಕ ಕೊರತೆಯನ್ನು ಸರಿದೂಗಿಸಿ ಅಭಿವೃದ್ಧಿ ಕಾಮಗಾರಿಗೆ ಪೂರಕವಾಗಿ ಕಾರ್ಯನಿರ್ವಹಿಸಿ. ಪ್ರಾಧಿಕಾರದ ಸಿ.ಎ ಸೈಟುಗಳ ಮಾರಾಟಕ್ಕೆ ಕ್ರಮವಹಿಸಿ. ಸೈಟುಗಳ ಲಭ್ಯತೆ ಮತ್ತು ದರವನ್ನು ಕುರಿತು ಪತ್ರಿಕಾ ಪ್ರಕಟಣೆ ನೀಡಿ ನಿಯಮಾನುಸಾರ ನಿವೇಶನಗಳನ್ನು ಹಂಚಿಕೆ ಮಾಡಿ. ನಗರದಲ್ಲಿ ಬಡಾವಣೆಗಳ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಶಿರಸಪ್ಪಯ್ಯನ ಮಠ ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರ ಟೆಂಡರ್ ಕರೆದು, ಕಾಮಗಾರಿಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಿ. ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳಾದ ಲೇಬರ್ ಸರ್ಕಲ್ ಅಭಿವೃದ್ಧಿ, ಉದ್ಯಾನವನಗಳು ಮತ್ತು ಕಂಪೌAಡ್ ಗೋಡೆ ಅಭಿವೃದ್ದಿ ಸೇರಿದಂತೆ ಇತರೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ. ಮುಂದಿನ ದಿನಗಳಲ್ಲಿ ಪ್ರತಿ ತಾಲ್ಲೂಕಿಗೂ ಪ್ರತ್ಯೇಕವಾಗಿ ಭೇಟಿ ನೀಡಿ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಲಾಗುವುದು. ಆದ್ದರಿಂದ ಯಾವುದೇ ಕಾಮಗಾರಿಗಳನ್ನು ಬಾಕಿ ಉಳಿಸಬೇಡಿ. ಸರ್ಕಾರದಿಂದ ನಿಗದಿತ ಅನುದಾನ ದೊರೆತ ಮೇಲೂ ಕಾಮಗಾರಿ ವಿಳಂಬವನ್ನು ಸಹಿಸುವುದಿಲ್ಲ. ರಾಜ್ಯದ ಟೆಂಡರ್‌ಗಳನ್ನು ರಾಜ್ಯದ ಗುತ್ತಿಗೆದಾರರಿಗೆ ನೀಡುವ ಕುರಿತು ಸೂಚನೆ ನೀಡಲಾಗಿದೆ. ಆದ್ದರಿಂದ ಟೆಂಡರ್‌ಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ. ಒಂದು ವೇಳೆ ಕಾಮಗಾರಿ ಕಳಪೆಯಾದಲ್ಲಿ ಕೂಡಲೇ ಸರಿಪಡಿಸಿಕೊಳ್ಳಲು ಮತ್ತು ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ರೈತರ ಸಹಭಾಗಿತ್ವದಲ್ಲಿ 50:50 ರೈತರಿಂದ ಭೂಮಿ ಖರೀದಿಸಿ ಅದನ್ನು ಪ್ರಾಧಿಕಾರದ ಬಡಾವಣೆ ನಿರ್ಮಾಣಕ್ಕೆ ಬಳಸಲಾಗುವುದು ಮತ್ತು ಇದರಲ್ಲಿ ಶೇ. 5 ರಷ್ಟು ನಿವೇಶನಗಳನ್ನು ಪತ್ರಕರ್ತರಿಗೆ ಮೀಸಲಿಡಲಾಗುವುದು. ಸಂಸದರು ಮತ್ತು ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬAಧಿಸಿದAತೆ ಕುಡಿಯುವ ನೀರು ಮತ್ತು ಒಳ ಚರಂಡಿ ವ್ಯವಸ್ಥೆ ಕುರಿತು ಯಾವುದಾದರೂ ಸಮಸ್ಯೆಗಳನ್ನು ತಿಳಿಸಿದಲ್ಲಿ ಅವುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಿ. ನಗರಸಭೆ ಮತ್ತು ಸ್ಥಳೀಯ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಮುಖ್ಯ. ಆದ್ದರಿಂದ ನಗರದ ಸ್ವಚ್ಛತೆ ಮತ್ತು ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಿ. ರಾಜ್ಯದಾದ್ಯಂತ ಫಾರಂ.ನA-03 ರ ಕಾರಣದಿಂದ ಸಾರ್ವಜನಿಕರು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕುರಿತು ಉನ್ನತ ಮಟ್ಟದ ವಿಶೇಷ ಸಭೆ ನಡೆಸಿ ಆದಷ್ಟು ಬೇಗ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಒಳಚರಂಡಿ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್, ಸಂಸದ ಸಂಗಣ್ಣ ಕರಡಿ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪೂರ, ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಿದ್ರಾಮೇಶ್ವರ, ಕಲಬುರ್ಗಿ ವಿಭಾಗದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಅಭಿಯಂತರರಾದ ಎಸ್.ಎನ್.ದಿನೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

Please follow and like us:
error