ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರಕಾರ ರಚಿಸಲಿವೆ: ಶರದ್ ಪವಾರ್

ಮುಂಬೈ, ನ.15: ಶಿವಸೇನೆ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ಹಾಗೂ ಕಾಂಗ್ರೆಸ್ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಲಿವೆ. ಈ ಮೂರು ಪಕ್ಷಗಳು ಪೂರ್ಣಾವಧಿ ಪೂರೈಸಲಿವೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೀಗ ರಾಷ್ಟ್ರಪತಿ ಆಡಳಿತದಲ್ಲಿರುವ ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂಬ ಮಾತನ್ನು ತಳ್ಳಿ ಹಾಕಿದ ಪವಾರ್, ಮೂರು ಪಕ್ಷಗಳು ಮಹಾರಾಷ್ಟ್ರದಲ್ಲಿ ಸರಕಾರ ರಚಿಸುವ ಸಂಬಂಧ ಕನಿಷ್ಠ ಕಾರ್ಯಕ್ರಮ ಕಾರ್ಯಸೂಚಿಗೆ ಒಪ್ಪಿಗೆ ಸೂಚಿಸುವೆ. ಮೂರು ಪಕ್ಷಗಳು ನಾಳೆ ರಾಜ್ಯಪಾಲರನ್ನು ಭೇಟಿಯಾಗಲಿವೆ. ರಾಜ್ಯದಲ್ಲಿ ಮೂರು ಪಕ್ಷಗಳು ಸರಕಾರ ರಚಿಸಲಿದ್ದು, ಈ ಸರಕಾರ ಐದು ವರ್ಷಗಳನ್ನು ಪೂರೈಸಲಿದೆ ಎಂದರು.

ಸೇನಾ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿಕೂಟ ಸರಕಾರ ಆರು ತಿಂಗಳಿಗಿಂತ ಹೆಚ್ಚು ಸಮಯ ಇರುವುದಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನಿವಿಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪವಾರ್, ‘‘ಫಡ್ನವಿಸ್ ನನಗೆ ಕೆಲವು ಸಮಯದಿಂದ ಪರಿಚಿತರು. ಆದರೆ, ಅವರು ಜ್ಯೋತಿಷ್ಯದ ವಿದ್ಯಾರ್ಥಿ ಎಂದು ಗೊತ್ತಿರಲಿಲ್ಲ’’ ಎಂದರು.

Please follow and like us:
error