ಬೆಂಗಳೂರು : ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪತ್ನಿ ಶ್ರೀಮತಿ ವರಲಕ್ಷ್ಮೀ ಗುಂಡೂರಾವ್ ನಿಧನರಾಗಿದ್ದಾರೆ.
ಅವರ ನಿಧನಕ್ಕೆ ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪತ್ನಿ ಶ್ರೀಮತಿ ವರಲಕ್ಷ್ಮೀ ಗುಂಡೂರಾವ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಕುಟುಂಬದವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಹೇಳಿದ್ಧಾರೆ.
ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪತ್ನಿ ಶ್ರೀಮತಿ ವರಲಕ್ಷ್ಮೀ ಗುಂಡೂರಾವ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಕುಟುಂಬದವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/alQQWntd3w
— Siddaramaiah (@siddaramaiah) January 6, 2021
KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ,Dr Sudhakar K @mla_sudhakar ಸೇರಿದಂತೆ ಇತರ ಗಣ್ಯರು ಸಂತಾಪ ಸೂಚಿಸಿದ್ಧಾರೆ.
ಮಾಜಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮಾತೃ ವಿಯೋಗವಾದ ಸುದ್ದಿ ತಿಳಿಯಿತು. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಮತ್ತು ಶ್ರೀ ಗುಂಡೂರಾವ್ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.@dineshgrao pic.twitter.com/YmVTWnh7Ra
— Dr Sudhakar K (@mla_sudhakar) January 6, 2021