ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನ ನಿಷೇಧ

ಕೊಪ್ಪಳ, : ಕೋವಿಡ್-19 ಹಿನ್ನೆಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯ ಕಾಪಾಡುವುದಕ್ಕೆ ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿಯ ಜಿಲ್ಲೆಯ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ತಾಲ್ಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಆಗಸ್ಟ್. 31 ರವರೆಗೆ ನಿಷೇಧಿಸಿ ಆದೇಶ ಹೋರಡಿಸಲಾಗಿದೆ.
ಈ ಆದೇಶದನ್ವಯ ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲಾ ಮುಂಜಾಗೃತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು. ಈ ಆದೇಶವನ್ನು ಜಾರಿಗೆಗೊಳಿಸಲು ದೇವಸ್ಥಾನ ಆಡಳಿತ ಮಂಡಳಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಂಬAಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Please follow and like us:
error

Related posts