ಕನ್ನಡನೆಟ್ ನ್ಯೂಸ್ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಮಾಜದಲ್ಲಿ ಭಯ ಸೃಷ್ಠಿಸುವ ಭಯೋತ್ಪಾದಕರ ಪರವೋ? ದಲಿತರ ಪರವೋ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ತಾವು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ ಎನ್ನುವಂತೆ ವರ್ತಿಸಲಿಲ್ಲ. ಜಾತ್ಯಾತೀತವಾಗಿ ಯೋಜನೆ ಜಾರಿ ಮಾಡಲಿಲ್ಲ. ಬದಲಾಗಿ ಓಲೈಕೆ ರಾಜಕೀಯ ಮಾಡಿದ್ದಾರೆ. ಈ ಹಿಂದೆ ಕೋಮು ಗಲಭೆ ನಡೆದಾಗ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿಲ್ಲ. ಅವರ ಈ ನಡೆಯೇ ಇಂದಿನ ಬೆಂಗಳೂರಿನ ಗಲಭೆಗೆ ಕಾರಣ ಎಂದು ಟೀಕಿಸಿದರು. ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಹಿಂದೂಗಳ ಹತ್ಯೆ ನಡೆದಾಗ ಕಠಿಣ ಕ್ರಮ ಕೈಗೊಳ್ಳಲಿಲ್ಲ. ಹಾಗಂತ ನಾನು ಈ ಗಲಭೆಗೆ ಸಿದ್ದರಾಮಯ್ಯ ನೇರ ಕಾರಣ ಎಂದು ಹೇಳುವುದಿಲ್ಲ. ಆದರೆ ಸಿಎಂ ಆಗಿದ್ದಾಗ ಕಠಿಣ ಕ್ರಮ ಕೈಗೊಳ್ಳದಿರುವುದು ಈ ಜನರಿಗೆ ಧೈರ್ಯ ಬಂದಿದೆ. ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದಲೇ ಈ ಜನರು ಬೆಳೆಯುತ್ತಿದ್ದಾರೆ ಎಂದರಯ. ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮನವಳ್ಳಿ, ಮುಖಂಡರಾದ ಸಿ.ವಿ.ಚಂದ್ರಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸಂಘರ್ಷಕ್ಕೆ ಬಂದವರು ಅಮಾಯಕರಾ -ನಳೀನ ಕುಮಾರ್ ಕಟೀಲ್ ಪ್ರಶ್ನೆ
Please follow and like us: