ಸಕಲ ಸರಕಾರಿ ಗೌರವಗಳೊಂದಿಗೆ ವಾಜಪೇಯಿ ಅಂತ್ಯಕ್ರಿಯೆ

ಹೊಸದಿಲ್ಲಿ,   ಗುರುವಾರ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಅಂತ್ಯಕ್ರಿಯೆ ಇಲ್ಲಿನ ಸ್ಮೃತಿ ಸ್ಥಳದಲ್ಲಿ ನೆರವೇರಿತು. ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿ ನೋಡಲು ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ, ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಾಮಿದ್ ಕರ್ಝಾಯಿ, ಭೂತಾನ್ ದೊರೆ ಜಿಗ್ಮಾ ಖೇಸರ್, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ನಿರ್ಮಲಾ ಸೀತಾರಾಮನ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕಾಂಗ್ರೆಸ್ ನಾಯಕರಾದ ಮನಮೋಹನ್ ಸಿಂಗ್, ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೊದಲಾದವರು ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದರು.

ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದ್ದು,  ದತ್ತುಪುತ್ರಿ ನಮಿತಾ ಭಟ್ಟಾಚಾರ್ಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.