ಸಚಿವ ಸಿ.ಟಿ.ರವಿಯನ್ನು ಟ್ವೀಟ್ ಮೂಲಕ ತಿವಿದ ಸಿದ್ದರಾಮಯ್ಯ

ಬೆಂಗಳೂರು,  : ‘‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹತ್ಯೆಯ ಆರೋಪಿಗಳಿಗೆ ಭಾರತ ರತ್ನ ಕೊಡುವುದಾದರೆ, ಕುಡಿದ ಮತ್ತಿನಲ್ಲಿ ಕಾರು ಅಪಘಾತ ನಡೆಸಿ ಅಮಾಯಕರನ್ನು ಸಾಯಿಸಿದವರಿಗೂ ಕನಿಷ್ಠ ರಾಜ್ಯೋತ್ಸವ ಪ್ರಶಸ್ತಿಯನ್ನಾದರೂ ಕೊಡಬೇಕಪ್ಪಾ!’’

ಸಾವರ್ಕರ್ ಅವರನ್ನು ಮಹಾತ್ಮ ಗಾಂಧಿಯ ಹತ್ಯೆಯ ಸಂಚುಕೋರ ಎಂದು ಸಿದ್ದರಾಮಯ್ಯ ಹೇಳಿದ್ದನ್ನು ಆಕ್ಷೇಪಿಸಿ ರಾಜ್ಯ ಸಚಿವ ಸಿ.ಟಿ.ರವಿ ಮಾಡಿರುವ ಟ್ವೀಟ್‌ಗೆ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇನ್ನೊಂದು ಟ್ವೀಟ್ ನಲ್ಲಿ  ‘‘ಅಧಿಕಾರ ಇಲ್ಲದಾಗ ಮಾನಸಿಕ ಕಾಯಿಲೆಯಿಂದ ನರಳುವವರು ಕಂಠಪೂರ್ತಿ ಕುಡಿದು ಕಾರು ಅಪಘಾತ ಮಾಡಿ ಅಮಾಯಕರನ್ನು ಸಾಯಿಸುತ್ತಾರೆ. ನಮ್ಮಂತಹವರು ರಾಜಕೀಯದ ಮಧ್ಯೆ ಬಿಡುವು ಮಾಡಿಕೊಂಡು ಇತಿಹಾಸ ಓದಿ, ಸತ್ಯ ತಿಳಿದುಕೊಂಡು ಮಾತಾಡುತ್ತೇವೆ.’’ ಎಂದು ಸಿ.ಟಿ.ರವಿಯವರ ಟ್ವೀಟ್ ಅನ್ನು ಉಲ್ಲೇಖಿಸಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Please follow and like us:
error