ಸಾರ್ವಜನಿಕರ ಮನವಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಿ : ವಿಕಾಸ್ ಕಿಶೋರ್ ಸುರಳ್ಕರ್

ಬೀಳಗಿಯಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಕೊಪ್ಪಳ,  ಕೊಪ್ಪಳ ಜಿಲ್ಲಾಡಳಿತದಿಂದ ನಡೆಯುತ್ತಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಡಿ  ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಮನವಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕುಷ್ಟಗಿ ತಾಲ್ಲೂಕು ಆಡಳಿತ ಇವರ ಸಹಯೋಗದಲ್ಲಿ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಹೋಬಳಿಯ ಕಬ್ಬರಗಿ ಗ್ರಾ.ಪಂ ವ್ಯಾಪ್ತಿಯ ಬೀಳಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರದಂದು (ಮಾ. 20) ಹಮ್ಮಿಕೊಂಡಿದ್ದ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ’’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಈ ಕಾರ್ಯಕ್ರಮದಡಿ ವಿವಿಧ ಇಲಾಖೆಗಳ ಮಳಿಗೆಗಳನ್ನು ಬೀಳಗಿ ಗ್ರಾಮದಲ್ಲಿ ಹಾಕಲಾಗಿದ್ದು, ಈ ಮಳಿಗೆಗಳಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಹಲವಾರು ಯೋಜನೆಗಳು ಹಾಗೂ ಗ್ರಾಮಕ್ಕೆ ಸಂಬAಧಿಸಿದ ಇತರ ಸಮಸ್ಯೆಗಳ ಬಗ್ಗೆ ಆಯಾ ಇಲಾಖೆಗಳ ಮಳಿಗೆಗಳಲ್ಲಿ ಅರ್ಜಿ ಸಲ್ಲಿಸಬಹುದು.  ಬಳಿಕ ಆ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲಾಗುವುದು ಎಂದರು.
ವಿವಿಧ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದರಿಂದ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಿ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.  ಕರೋನಾ ಹರಡದಂತೆ ಮುಂಜಾಗೃತೆ ವಹಿಸಬೇಕು.  ಕಂದಾಯ ಸಚಿವರಾದ ಆರ್. ಅಶೋಕ ಅವರ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಎಂಬ ಘೋಷವಾಕ್ಯದಡಿ ಪ್ರತಿ ತಿಂಗಳ ಮೂರನೇ ಶನಿವಾರದಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗುತ್ತಿದೆ.  ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡAತೆ ಇಡೀ ಜಿಲ್ಲಾಡಳಿತವೇ ನಿಮ್ಮ ಗ್ರಾಮಕ್ಕೆ ಬಂದಿದೆ.  ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರೆಲ್ಲರೂ ಸಹಕರಿಸಬೇಕು. ಮತ್ತು ಈ ಅವಕಾಶದ ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ವರ್ಣಿತ್ ನೇಗಿ,  ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶರಣಬಸವರಾಜ, ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಕುಷ್ಟಗಿ ತಹಶೀಲ್ದಾರ ಎಂ.ಸಿದ್ದೇಶ್, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲಕಾನಂದ ಮಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಅಕ್ಕಮಹಾದೇವಿ, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಎಸ್.ಬಿ ದಾನರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us:
error