ಸಿಇಟಿ ಪರೀಕ್ಷೆ: ಕೋವಿಡ್-19 ದೃಢಪಟ್ಟ ವಿದ್ಯಾರ್ಥಿಗಳಿದ್ದಲ್ಲಿ ಮಾಹಿತಿ ನೀಡಲು ಮನವಿ


ಕೊಪ್ಪಳ,  : ಜುಲೈ 30 ಮತ್ತು 31 ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಕೋವಿಡ್-19 ದೃಢಪಟ್ಟ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಲ್ಲಿ ಅಂತಹವರು ಕಡ್ಡಾಯವಾಗಿ ಹೆಲ್ಪ್ಲೈನ್‌ಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದೇವೇಂದ್ರಪ್ಪ ಗಡೇದ ತಿಳಿಸಿದ್ದಾರೆ.
ಸಿ.ಇ.ಟಿ ಪರೀಕ್ಷೆಯು ಜಿಲ್ಲೆಯಲ್ಲಿ ಕೊಪ್ಪಳ ಮತ್ತು ಗಂಗಾವತಿ ನಗರಗಳಲ್ಲಿ ಒಟ್ಟು 8 ಕೆಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ಗಳನ್ನು ಧರಿಸಿಕೊಂಡು ಹಾಜರಾಗಬೇಕು. ಹಾಗೆಯೇ ಕೋವಿಡ್-19 ದೃಢಪಟ್ಟ ವಿದ್ಯಾರ್ಥಿಗಳು ಕೆ.ಇ.ಎ ಆನ್‌ಲೈನ್ ಪೋರ್ಟಲ್‌ನಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದ್ದು, ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಅಂತಹ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ಕುಕನೂರು ತಾಲೂಕಿನ ತಳಕಲ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲಾಗುವುದು. ಆದ್ದರಿಂದ ಕೋವಿಡ್-19 ದೃಢಪಟ್ಟ ವಿದ್ಯಾರ್ಥಿಗಳು ಅಥವಾ ಪಾಲಕರು ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯವಾಣಿ ಸಂಖ್ಯೆ: 08539-225001, ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 08539-222246 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error