ಬೆಂಗಳೂರು : ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು @BJP4Karnataka ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯದ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ. ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ.  ಸಿಎಂ ಆಸ್ಪತ್ರೆಯಲ್ಲಿದ್ದಾರೆ,‌ ರಾಜ್ಯ  @BJP4Karnataka ಸರ್ಕಾರ ಐ.ಸಿ.ಯು ನಲ್ಲಿದೆ. ವರ್ಷದ ಹಿಂದೆ ಮೊದಲ ಬಾರಿ‌ ಕೊರೊನಾ ದಾಳಿ ಇಟ್ಟಾಗ ಅದು ಅನಿರೀಕ್ಷಿತ ಆಘಾತ. ಒಂದು ವರ್ಷದ ಅನುಭವದಿಂದ ರಾಜ್ಯ ಸರ್ಕಾರ ಕೊರೊನಾ ಎದುರಿಸಲು ತನ್ನನ್ನು ಇನ್ನಷ್ಟು ಸಜ್ಜುಗೊಳಿಸಬೇಕಾಗಿತ್ತು. ಕೊರೊನಾವನ್ನೂ‌ ತನ್ನ ಭ್ರಷ್ಟತೆಗೆ ಬಳಸಿಕೊಂಡ @BJP4Karnataka ಸರ್ಕಾರ ಈಗ ಕೈಚೆಲ್ಲಿ ಕೂತಿದೆ. ರಾಜ್ಯ  @BJP4Karnataka ಸರ್ಕಾರದ ಮಾರ್ಗಸೂಚಿಗಳನ್ನು ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆ.  ಮುಖ್ಯಮಂತ್ರಿಯವರಿಗೆ ಅವರಿಗೆ ಸಚಿವರ ಮೇಲಾಗಲಿ, ಶಾಸಕರ ಮೇಲಾಗಲಿ ನಿಯಂತ್ರಣವೇ ಇಲ್ಲದೆ ನಿರ್ಮಾಣಗೊಂಡಿರುವ‌ ಅರಾಜಕತೆಯೇ ಇಂದಿನ ದುಸ್ಥಿತಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:
error