ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಕಾರಣ ಏನು ?

ಬೆಂಗಳೂರು, ಡಿ.17-ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ ವಿ (33) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ತಡರಾತ್ರಿವರೆಗೂ ಸ್ನೇಹಿತರ ಮನೆಯಲ್ಲಿ ಪಾರ್ಟಿ ಮುಗಿಸಿ ಗೆಳೆಯನ ಮನೆಯಲ್ಲಿಯೇ ಡಿವೈಎಸ್ಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವಿನಾಯಕ ಲೇ ಔಟನಲ್ಲಿ ನಡೆದಿದೆ.

 

ಅನ್ನಪೂರ್ಣೇಶ್ವರಿ ನಗರದಲ್ಲಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.

ಲಕ್ಷ್ಮೀ ಅವರು 2014ರ ಬ್ಯಾಚ್​ನ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಸದ್ಯ ಸಿಐಡಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಘಟನಾ ಸ್ಥಳಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Please follow and like us:
error