ಸಿಬಿಐನವರಿಗೆ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ ? ಹಿನ್ನೆಲೆ ಏನು ?  ಸ್ಪಷ್ಟಪಡಿಸಿ- ಸಂಸದ ಡಿ.ಕೆ.ಸುರೇಶ್

ಬೆಂಗಳೂರು :  ಪ್ರಮುಖವಾಗಿ ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಛೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡ CBI ಅಧಿಕಾರಿಗಳಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ಎಂದು ಟ್ವೀಟ್ ಮಾಡಿರುವ ಸಂಸದ ಡಿ.ಕೆ.ಸುರೇಶ್  CBI ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ. ಇದರಲ್ಲಿ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಿಗಳ ದಾಖಲೆ ಪರಿಶೀಲನೆಯಲ್ಲಿ ನನ್ನ ಮತ್ತು ನನ್ನ ಅಣ್ಣನ ಮನೆಯಿಂದ ಸೇರಿ ಒಟ್ಟು 6.78 ಲಕ್ಷ ರೂಪಾಯಿಗಳು ಸಿಕ್ಕಿರುತ್ತದೆ. ಅದರಲ್ಲಿ ನನ್ನ ದೆಹಲಿ ನಿವಾಸದಲ್ಲಿ 1.57 ಲಕ್ಷ, ಬೆಂಗಳೂರಿನ ನನ್ನ ಅಣ್ಣನ ನಿವಾಸದಲ್ಲಿ 1.71 ಲಕ್ಷ, ಅವರ ಬೆಂಗಳೂರಿನ ಕಛೇರಿಯಲ್ಲಿ 3.5 ಲಕ್ಷ ರೂಪಾಯಿಗಳು ಅಧಿಕಾರಿಗಳಿಗೆ ಸಿಕ್ಕಿರುವುದು ಖಾತ್ರಿ ಪಡಿಸಿದ್ದಾರೆ‌.

ಇನ್ನು ನನ್ನ ಅಣ್ಣನ ದೆಹಲಿ ಮನೆ ಮತ್ತು ನನ್ನ ಬೆಂಗಳೂರಿನ ಮನೆಯಲ್ಲಿ ಯಾವುದೇ ಹಣ ಸಿಕ್ಕಿರುವುದಿಲ್ಲ. ಹಾಗೆಯೇ ನಮ್ಮ ಎರಡೂ ಮನೆಗಳಲ್ಲಿ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಆಭರಣಗಳನ್ನೂ ವಶಪಡಿಸಿಕೊಂಡಿಲ್ಲ. ಆಭರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ IT ಮತ್ತು ED ಗೆ ಕೊಟ್ಟ ದಾಖಲೆಗಳನ್ನೇ ಮತ್ತೊಮ್ಮೆ CBI ಸ್ಪಷ್ಟನೆ ತಗೆದುಕೊಂಡಿದೆ.

ಇನ್ನು CBI ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ. ಇದರಲ್ಲಿ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು.

ಈ ಹಿಂದೆ IT ಮತ್ತು ED ಅಧಿಕಾರಿಗಳು ಪರಿಶೀಲಿಸಿದ ದಾಖಲೆಗಳ ನಕಲು ಪ್ರತಿಗಳನ್ನು CBI ಕಡೆ ಕೊಟ್ಟಿರುತ್ತೇವೆ. ಇನ್ನು ಮುಂದೆಯೂ ಬೇಕಾದ ಎಲ್ಲಾ ದಾಖಲೆಗಳನ್ನು ಒಪ್ಪಿಸಲು ತಯಾರಿದ್ದೇವೆ. ಈ ಎಲ್ಲಾ ಪರೀಕ್ಷೆಗಳನ್ನು ಎದುರಿಸಿ ಹೊರಬರುವ ವಿಶ್ವಾಸ ನಮಗಿದೆ. ಅಭಿಮಾನಿಗಳು ಮತ್ತು ಹಿತೈಷಿಗಳಾದ ನಿಮ್ಮೆಲ್ಲರ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ.

Please follow and like us:
error