fbpx

ಸೆಪ್ಟೆಂಬರ್. 30 ರವರೆಗೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ನಿಷೇಧ


ಕೊಪ್ಪಳ, : ಕೋವಿಡ್-19 ಹಿನ್ನೆಲೆ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಸೆಪ್ಟೆಂಬರ್. 30 ರವರೆಗೆ ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಆದೇಶ ಹೊರಡಿಸಿದ್ದಾರೆ.
ಜಂಟಿ ಕಾರ್ಯದರ್ಶಿಗಳು, ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಭಾರತ ಸರ್ಕಾರ, ನವದೆಹಲಿ ಇವರು ದೇಶಾದ್ಯಂತ ಎಲ್ಲ ಧಾರ್ಮಿಕ ಸ್ಥಳ, ಸಾರ್ವಜನಿಕ ಪೂಜಾ, ಪ್ರಾರ್ಥನಾ ಸ್ಥಳಗಳನ್ನು  ಜೂನ್. 08 ರಿಂದ ತೆರೆಯಲು ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ.  ಆದರೆ ಕೊಪ್ಪಳ ಜಿಲ್ಲೆಯಲ್ಲಿರುವ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟçಗಳಿಂದ ಮತ್ತು ಇತರೆ ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಂಭವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-19 ಹರಡದಂತೆ ತಡೆಯುವ ಕುರಿತು ಮುಂಜಾಗೃತಾ ಕ್ರಮವಾಗಿ ಹುಲಿಗೆ ದೇವಸ್ಥಾನದಲ್ಲಿ ಆಗಸ್ಟ್. 31 ರವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿತ್ತು.  ಆ. 27 ರಂದು ಜರುಗಿದ ವ್ಯವಸ್ಥಾಪನ ಸಮಿತಿ ಸಭೆಯಲ್ಲಿ ಚರ್ಚಿಸಿ ಈಗಾಗಲೇ ದೇವಸ್ಥಾನದ ಅರ್ಚಕರು ಹಾಗೂ ಕಂಪ್ಯೂಟರ್ ಆಪರೇಟರ್‌ಗೆ ಕರೋನಾ ವೈರಸ್ ದೃಢಪಟ್ಟಿದ್ದು, ಪಕ್ಕದ ಜಿಲ್ಲೆಯಾದ ಬಳ್ಳಾರಿ ಮತ್ತು ನಮ್ಮ ಕೊಪ್ಪಳ ಜಿಲ್ಲೆಯಲ್ಲಿ ಕೂಡ ಸಾಕಷ್ಟು ಪ್ರಕರಣಗಳು ಕಂಡು ಬಂದಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಸೆ. 30 ರವರೆಗೆ ದೇವಸ್ಥಾನವನ್ನು ತೆರೆಯದೇ ಇರುವುದು ಸೂಕ್ತವೆಂದು ಸಮಿತಿಯು ಸರ್ವಾನುಮತದಿಂದ ನಿರ್ಣಯಿಸಿದಂತೆ ಹಾಗೂ ಭಕ್ತರು/ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಹುಲಿಗೆ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನವನ್ನು ನಿಷೇಧಿಸುವಂತೆ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಕೊಪ್ಪಳ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಕೋರಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯ ಕಾಪಾಡುವುದಕ್ಕೆ ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿಯ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಸಾರ್ವಜನಿಕ ದರ್ಶನವನ್ನು ಸೆಪ್ಟೆಂಬರ್. 30 ರವರೆಗೆ ನಿಷೇಧಿಸಿ ಈ ಮೂಲಕ ಆದೇಶಿಸಿದೆ.
ಈ ಆದೇಶದನ್ವಯ ದೇವಸ್ಥಾನದ ಆಡಳಿತ ಮಂಡಳಿಯವರು ದೇವಸ್ಥಾನದಲ್ಲಿ ನಡೆಯುವ ದಿನನಿತ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲಾ ಮುಂಜಾಗೃತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು ವಿನಾಯಿತಿ ನೀಡಿದೆ.  ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕ್ರಮ ಜರುಗಿಸಲಾಗುವುದು.  ಈ ಆದೇಶವನ್ನು ಜಾರಿಗೆಗೊಳಿಸಲು ದೇವಸ್ಥಾನ ಆಡಳಿತ ಮಂಡಳಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಪ್ಪಳ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಂಬAಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error
error: Content is protected !!