ಹರೀಶ್ ಕುಟುಂಬಕ್ಕೆ ಮುಖ್ಯಮಂತ್ರಿ ನೆರವು

Kannadanet NEWS : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ಹಿರಿಯ ಪತ್ರಕರ್ತ ಎಚ್.ಆರ್.ಹರೀಶ್ ಕೋಟೆ ಅವರ ಕುಟುಂಬಕ್ಕೆ
2 ಲಕ್ಷ ರೂ ಪರಿಹಾರವನ್ನು ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

ಹರೀಶ್ ಕೋಟೆ ಅವರು ಹಾಸನಮಿತ್ರ, ಜನಮಿತ್ರ, ಜೀ ಟೀವಿ, ಅಮೋಘ ಟಿವಿ ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು. ಹರೀಶ್ ಕುಟುಂಬ ಅವರ ಚಿಕಿತ್ಸೆಗಾಗಿ ಸುಮಾರು 10 ಲಕ್ಷಕ್ಕೂ ಹೆಚ್ಚು ವೆಚ್ಚ ಮಾಡಿತ್ತು. ಸಂಕಷ್ಟದಲ್ಲಿರುವ ಹರೀಶ್ ಕುಟುಂಬಕ್ಕೆ ನೆರವು ನೀಡುವಂತೆ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.  ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Please follow and like us:
error