fbpx

ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಕೆಸರೆರಚಾಟ ನಿಲ್ಲಿಸಬೇಕು-ಹೆಚ್.ಡಿ.ಕುಮಾರಸ್ವಾಮಿ

ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷಗಳು ಮೊದಲು ಕೆಸರೆರಚಾಟ ನಿಲ್ಲಿಸಬೇಕು. ನಮ್ಮ ಆದ್ಯತೆ ಜನರ ಜೀವ ಮತ್ತು ಜೀವನವಾಗಬೇಕು. ಮುಖ್ಯಮಂತ್ರಿಗಳು ಈ ಬಗ್ಗೆ ಸೂಕ್ತ ಸ್ಪಷ್ಟನೆ ನೀಡಿ, ಪರಿಣಾಮಕಾರಿಯಾಗಿ ಕೋವಿಡ್‌ ಅನ್ನು ನಿಗ್ರಹಿಸುವತ್ತ ಗಮನಹರಿಸಬೇಕು. ಕೋವಿಡ್‌ ನಿಗ್ರಹಿಸುವುದಕ್ಕೆ ನಮ್ಮ ಬೆಂಬಲ. ನಿಮ್ಮ ಕ್ಷುಲ್ಲಕ ನಡವಳಿಕೆಗಳಿಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

. ಪರಿಕರಗಳ ಖರೀದಿಯಲ್ಲಿ ಅಕ್ರಮವೆಸಗಿರುವುದು ನಿಜವೇ ಆಗಿದ್ದರೆ, ಅದು ಆಡಳಿತ ಪಕ್ಷದ ನೈತಿಕತೆಯೇ ಇಲ್ಲದ, ಮನುಷ್ಯತ್ವ ಹೀನ ಕೃತ್ಯವೇ ಸರಿ. ಕೇವಲ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹಳೇ ರಾಷ್ಟ್ರೀಯ ಪಕ್ಷ ಮತ್ತು ಅದರ ನಾಯಕರು ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ ಅದು ಆ ನಾಯಕರ ರಾಜಕೀಯ ದಾಹದ ಪ್ರತೀಕ.

ಪರಿಕರಗಳ ಖರೀದಿ ಅಕ್ರಮದ ಬಗೆಗಿನ ಅತ್ಯಂತ ಹಳೇ ರಾಷ್ಟ್ರೀಯ ಪಕ್ಷವೊಂದರ ಆರೋಪ, ಅದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಪ್ರತ್ಯಾರೋಪ, ಕಸರೆರಚಾಟವನ್ನು ಗಮನಿಸಿದೆ. ಕೋವಿಡ್‌ ಈ ರಾಜ್ಯದ ಪ್ರತಿಯೊಬ್ಬನ ಜೀವ, ಜೀವನಕ್ಕೆ ಬೆದರಿಕೆಯೊಡ್ಡಿರುವಾಗ, ಬದುಕನ್ನೇ ಕಸಿಯುತ್ತಿರುವಾಗ ಎರಡೂ ಪಕ್ಷಗಳ ಬೇಜವಾಬ್ದಾರಿ ವರ್ತನೆ ಕಂಡು ಬೇಸರವಾಗಿದೆ ಎಂದು ಹೇಳಿದ್ದಾರೆ

Please follow and like us:
error
error: Content is protected !!