ಹೇಮರೆಡ್ಡಿ ಮಲ್ಲಮ್ಮ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

: ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಹೇಮರೆಡ್ಡಿ ಮಲ್ಲಮ್ಮ ರವರ ಭಾವಚಿತ್ರಕ್ಕೆ ಇಂದು (ಮೇ 10) ಪುಷ್ಪ ನಮನ ಸಲ್ಲಿಸಲಾಯಿತು.
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ರವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.  ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us:
error