ಹೋಳಿ ಹಬ್ಬ : ಮದ್ಯ ಮಾರಾಟ ನಿಷೇಧ

ಕೊಪ್ಪಳ ಮಾ ೨೦ : ಕೊಪ್ಪಳ ಜಿಲ್ಲೆಯಾದ್ಯಂತ ಹೋಳಿ ಹಬ್ಬದ ಪ್ರಯುಕ್ತ ಮಾ. ೨೦ರ ಸಂಜೆ ೦೪ ರಿಂದ ೨೩ರ ಬೆಳಿಗ್ಗೆ ೦೬ ಗಂಟೆಯವರೆಗೆ ಮದ್ಯಪಾನ, ಮಧ್ಯ ಮಾರಾಟ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಮಾ. ೨೦ & ೨೧ ರಂದು ಕೊಪ್ಪಳ ಜಿಲ್ಲೆಯಾದ್ಯಂತ ಕಾಮದಹನ ಹಾಗೂ ಮಾ. ೨೧ & ೨೨ ಹೋಳಿ (ಓಕಳಿ) ಆಚರಿಸುತ್ತಿರುವ, ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಮಧ್ಯಪಾನ, ಮಧ್ಯ ಮಾರಾಟ ನಿಷೇಧಿಸಲಾಗಿದ್ದು, ಜಿಲ್ಲೆಯ ಕೊಪ್ಪಳ ನಗರ, ಕುಷ್ಟಗಿ, ಹನುಮಸಾಗರ, ಬೇವೂರ, ತಾವರಗೇರಾ, ಕನಕಗಿರಿ ಹಾಗೂ ಕಾರಟಗಿ ಠಾಣಾ ವ್ಯಾಪ್ತಿಗಳಲ್ಲಿ ಮಾ. ೨೦ರ ಸಂಜೆ ೦೪ ರಿಂದ ೨೨ರ ಬೆಳಿಗ್ಗೆ ೦೬ ಗಂಟೆಯವರೆಗೆ ಮತ್ತು ಗಂಗಾವತಿ ನಗರ ಹಾಗೂ ಗ್ರಾಮೀಣ, ಕೊಪ್ಪಳ ಗ್ರಾಮೀಣ, ಮುನಿರಾಬಾದ, ಅಳವಂಡಿ, ಕುಕನೂರು ಹಾಗೂ ಯಲಬುರ್ಗಾ ಠಾಣಾ ವ್ಯಾಪ್ತಿಗಳಲ್ಲಿ ಮಾ. ೨೧ರ ಸಂಜೆ ೦೪ ರಿಂದ ೨೩ರ ಬೆಳಿಗ್ಗೆ ೦೬ ಗಂಟೆಯವರೆಗೆ ಎಲ್ಲಾ ವೈನ್‌ಶಾಪ್, ಬಾರ್‌ಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು, ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.