5 ರಾಜ್ಯಗಳಿಂದ ಜನರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಕರ್ನಾಟಕ ಸರಕಾರ

ಹೊಸದಿಲ್ಲಿ: ಕೊರೋನ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೆರೆಯ 5 ರಾಜ್ಯಗಳಿಂದ ಆಗಮಿಸುವವರಿಗೆ ರಾಜ್ಯ ಸರಕಾರವು ನಿಷೇಧ ಹೇರಿದೆ.

ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಿಂದ ವಿಮಾನಗಳು, ರೈಲುಗಳು ಮತ್ತು ಯಾವುದೇ ವಾಹನಗಳು ರಾಜ್ಯ ಪ್ರವೇಶಿಸುವಂತಿಲ್ಲ ಎಂದು ರಾಜ್ಯ ಸರಕಾರ ತಿಳಿಸಿದೆ.

ಭಾರತದಲ್ಲಿ ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಿನ ಕೊರೋನ ಪ್ರಕರಣಗಳು ದಾಖಲಾಗಿವೆ.

Please follow and like us:
error