ಸಿಂಧನೂರು : AICCTU ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ಸಿಂಧನೂರು ನೇತೃತ್ವದಲ್ಲಿ ರಾಯಚೂರು ಜಿಲ್ಲೆ ಸಿಂಧನೂರು ನಗರಸಭೆಯಲ್ಲಿ ದಿನಗೂಲಿ ಪೌರಕಾರ್ಮಿಕರ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿ 6 ತಿಂಗಳು ಕಳೆದರೂ ಇಲ್ಲಿಯವರೆಗೂ ನೇಮಕಾತಿ ಮಾಡಿಕೊಳ್ಳದೇ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಇಲಾಖೆ ನಿಯಮಾವಳಿ ಪ್ರಕಾರ ಪೌರಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಬೇಕು ಹಾಗೂ ಕಾರ್ಮಿಕರಿಗೆ ನಿವೇಶನ,ವಸತಿ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದ ಪ್ರವಾಸಿ ಮಂದಿರ ದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇದೆ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ನಾಗರಾಜ ಪೂಜಾರ್ ಗೌರವಾಧ್ಯಕ್ಷರು ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ಸಿಂಧನೂರು, ಬಸವರಾಜ ಕೊಂಡೆ ಅಧ್ಯಕ್ಷರು ಭಗತ್ ಸಿಂಗ್ ಆಟೋ ಚಾಲಕರ ಸಂಘ ಸಿಂಧನೂರು, ಬಿ.ಎನ್ ಯರದಿಹಾಳ, ಶೇಕ್ಷಾವಲಿ, ಮಹಾದೇವ ಅಮರಾಪುರ ಮಲ್ಲಿಕಾರ್ಜುನ ಕುರುಗೋಡು ಪಾರ್ವತೆಮ್ಮ, ಹನುಮ್ಮ ನಾಗರಾಜ ಸೂಂಲಗಿ, ಪಂಪಾಪತಿ ಇತರರು ಇದ್ದರು.
AICCTU ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ
Please follow and like us: