ಈ ಸ್ವಾತಂತ್ರ ನಮ್ಮ ಪೂರ್ವಜರ ತ್ಯಾಗ, ಬಲಿದಾನಗಳ ಪ್ರತೀಕವಾಗಿದೆ : ಸುರಳ್ಕರ್ ವಿಕಾಸ್ ಕಿಶೋರ್

ಕೊಪ್ಪಳ  ಇಂದು ನಾವು ಅನುಭವಿಸುತ್ತಿರುವ, ಆಚರಿಸುತ್ತಿರುವ ಸ್ವಾತಂತ್ರö್ಯವು ನಮ್ಮ ಪೂರ್ವಜರು ಮಾಡಿದ ತ್ಯಾಗ, ಬಲಿದಾನಗಳ ಪ್ರತೀಕವಾಗಿದೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಷ್ಟçದ ಮಹಾನ್ ನಾಯಕರು ಸ್ವಾತಂತ್ರö್ಯಕ್ಕಾಗಿ ಹಗಲಿರುಳು ಶ್ರಮಿಸಿ, ಹೋರಾಡಿ ನಮಗೆ ಸ್ವಾತಂತ್ರö್ಯ ದೊರಕಿಸಿಕೊಟ್ಟರು. ಅವರು ದೇಶಕ್ಕಾಗಿ ನೀಡಿದ ಅನನ್ಯ ಕೊಡುಗೆಯನ್ನು ಸ್ಮರಿಸುವುದರ ಜೊತೆಗೆ ಅವರ ಜೀವನದ ಆದರ್ಶ ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಾಮಾಣಿಕವಾಗಿ ಬದುಕಬೇಕು. ನಾವೆಲ್ಲರೂ ಪ್ರಾಮಾಣಿಕತೆಯಿಂದ ಶೇ. 100 ಪ್ರತಿಶತ ಕೆಲಸ ಮಾಡಿದಾಗ ಮಾತ್ರ ಇಂತಹ ದಿನಾಚರಣೆಗೆ ಸಾರ್ಥಕತೆ ದೊರೆಯುತ್ತದೆ ಮತ್ತು ಆ ಮಹಾನ್ ನಾಯಕರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error