ಅತಿವೃಷ್ಠಿಯಿಂದ ನೊಂದ ರೈತ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ. 

ಬಳ್ಳಾರಿ : 

ಇಷ್ಟು ದಿನ ಬರಗಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಈಗ  ಇದೀಗ ಅತಿವೃಷ್ಠಿಯಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ‌ ಸುರಿಯುತ್ತಿರುವ ಮಳೆಯಿಂದ ನೆಲದಲ್ಲಿ‌ ತೇವಾಂಶ ಹೆಚ್ಚಾಗಿ ಮೆಣಸಿನಕಾಯಿ ಬೆಳೆ ಹಾಳಾಗಿದೆ. ಇದರಿಂದಾಗಿ ಕುರುಗೋಡು‌ ತಾಲೂಕಿನ ಬಾದನಹಟ್ಟಿ ಗ್ರಾಮದ ರೈತ ಗಾಡಿ ಹುಲುಗಪ್ಪ (51) ಇಂದು ತನ್ನ ಜಮೀನಿನಲ್ಲಿನ‌ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಏಳು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆ ನಾಟಿ‌ ಮಾಡಿದ್ದ. ಬ್ಯಾಂಕ್ ಆಪ್ ಇಂಡಿಯಾದಲ್ಲಿ‌ ಸೇರಿದಂತೆ ಹಲವು ಕಡೆಗಳಲ್ಲಿ ಸಾಲ‌ಪಡೆದಿದ್ದನು. ಈ ಬಗ್ಗೆ ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Related posts