ಅತ್ಯಾಚಾರ ಪ್ರಕರಣ ಖಂಡಿಸಿ ಹುಕ್ಕೇರಿ ಪಟ್ಟಣ ಬಂದ್

ಚಿಕ್ಕೋಡಿ : ಉತ್ತರ ಪ್ರದೇಶದ ಹತ್ರಾಸ್ ದಲ್ಲಿ ನಡೆದ ಯುವತಿ‌ ಮೇಲೆ ಅತ್ಯಾಚಾರ ಪ್ರಕರಣ ಖಂಡಿಸಿ ಹುಕ್ಕೇರಿ ಪಟ್ಟಣ ಬಂದ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ.ನಗರದ ವಿವಿಧ ದಲಿತ ಸಂಘಟನೆಗಳು‌ ಕರೆ ನೀಡಿರುವ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ ಹಿನ್ನೆಲೆ ಸ್ವಯಂ ಪ್ರೇರಿತರಾಗಿ ಅಂಗಡಿ ವ್ಯಾಪಾರಿ ಮಳಿಗೆಗಳನ್ನು ಮುಚ್ಚಿ ವ್ಯಾಪಾರಸ್ಥರು ಬೆಂಬಲ ಸೂಚಿಸಿದ್ದಾರೆ. ಬಂದ್ ಹಿನ್ನೆಲೆ ಬಸ್ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ.

Please follow and like us:
error