ಅಧಿಕಾರಿಗಳು, ಸಿಬ್ಬಂದಿ ಕೇಂದ್ರಸ್ಥಾನ ಬಿಡುವಂತಿಲ್ಲ : ಡಿ.ಸಿ ಸೂಚನೆ


ಕೊಪ್ಪಳ, ): ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಕೊಪ್ಪಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸೂಚನೆ ನೀಡಿದ್ದಾರೆ.
ದೇಶದಾದ್ಯಂತ ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕೇಂದ್ರ ಗೃಹ ಮಂತ್ರಾಲಯವು ಕೋವಿಡ್-19 ಸೊಂಕು ನಿವಾರಣೆ, ನಿಯಂತ್ರಣ ಮತ್ತು ಜಾಗೃತಿಗೆ ಸಂಬAಧಿಸಿದAತೆ ಮಾರ್ಗಸೂಚಿಗಳನ್ನು ಹೊರಡಿಸಿದೆ.  ಈ ಮಾರ್ಗಸೂಚಿಗಳು ಏಪ್ರಿಲ್ 30 ರವರೆಗೆ ಜಾರಿಯಲ್ಲಿರುತ್ತವೆ ಎಂದು ಸರ್ಕಾರದ ಆದೇಶವಾಗಿರುತ್ತದೆ.  ಆದ್ದರಿಂದ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್-19 ಸೊಂಕು ನಿವಾರಣೆ, ನಿಯಂತ್ರಣ ಮತ್ತು ಜಾಗೃತಿಗೆ ಸಂಬAಧಿಸಿದAತೆ ಅಗತ್ಯ ಕ್ರಮಗಳ್ಳಬೇಕಾಗಿರುವುದರಿಂದ, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿ ಉಪಸ್ಥಿತರಿರಬೇಕು. ಹಾಗೂ ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೂ ಸಹ ಕೇಂದ್ರಸ್ಥಾನದಲ್ಲಿರುವAತೆ ನಿರ್ದೇಶನಗಳನ್ನು ನೀಡಲು ಸೂಚಿಸಲಾಗಿದೆ.  
ತುರ್ತು ಸಂದರ್ಭದಲ್ಲಿ ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಜಿಲ್ಲಾಧಿಕಾರಿಗಳಿಂದ ಲಿಖಿತವಾಗಿ ಅನುಮತಿಯನ್ನು ಪಡೆದು ಕೇಂದ್ರಸ್ಥಾನ ಬಿಡಬೇಕು.  ಈ ಸೂಚನೆಯನ್ನು ಪಾಲಿಸದೇ ಇದ್ದಲ್ಲಿ ಸಂಬAಧಪಟ್ಟ ಅಧಿಕಾರಿಗಳು/ ನೌಕರರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗಿವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.  

Please follow and like us:
error