ಅನರ್ಹ 15 ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು, ಸೆ.21: ಮೈತ್ರಿ ಸರಕಾರದ ಅವಧಿಯಲ್ಲಿ ಅನರ್ಹಗೊಂಡ 17 ಕಾಂಗ್ರೆಸ್- ಜೆಡಿಎಸ್ ಶಾಸಕರ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.ಉಪಚುನಾವಣೆಯ ಮತದಾನ ಪ್ರಕ್ರಿಯೆಯು ಅಕ್ಟೋಬರ್ 21 ರಂದು ನಡೆಯಲಿದ್ದು, 24 ರಂದು ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 4 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನಾಂಕವಾಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.ತಡೆಯಾಜ್ಞೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿಲ್ಲ.

ಒಟ್ಟು 17 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿತ್ತು. ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ನ್ಯಾಯಾಲಯ ತಡೆ ನೀಡಿರುವುದರಿಂದ ಉಳಿದ 15 ಕ್ಷೇತ್ರಗಳಿಗೆಚುನಾವಣೆ ನಡೆಯಲಿದೆ.

ಅಕ್ಟೋಬರ್‌ 21ರಂದು ಚುನಾವಣೆ ನಡೆಯಲಿದ್ದು ಅ.24ಕ್ಕೆ ಫಲಿತಾಂಶ ಹೊರ ಬರಲಿದೆ. ಉಪಚುನಾವಣೆ ದಿನಾಂಕ ಪ್ರಕಟವಾಗಿರುವುದರಿಂದ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸುನೀಲಅರೋರಾ ತಿಳಿಸಿದರು.

ಉಪಚುನಾವಣೆ ನಡೆಯಲಿರುವ  ಕ್ಷೇತ್ರಗಳು: ಗೋಕಾಕ್, ಅಥಣಿ, ರಾಣೆಬೆನ್ನೂರು, ಕಾಗವಾಡ, ಹಿರೇಕೆರೂರು, ವಿಜಯನಗರ, ಯಲ್ಲಾಪುರ, ಚಿಕ್ಕಬಳ್ಳಾಪುರ, ಹುಣಸೂರು, ಕೆ.ಆರ್.ಪೇಟೆ, ಹೊಸಕೋಟೆ, ಕೆ.ಆರ್.ಪುರಂ, ಮಹಾಲಕ್ಷ್ಮಿ ಲೇ ಔಟ್, ಯಶವಂತಪುರ, ಶಿವಾಜಿನಗರ.

Please follow and like us:
error

Related posts