ಅನ್ನಭಾಗ್ಯ ಅಕ್ಕಿಗೆ ಕನ್ನ : ಅಧಿಕಾರಿಗಳಿಂದ ದಾಳಿ ,ಅಕ್ಕಿ ಜಪ್ತಿ

ಕೊಪ್ಪಳ : ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ನಗರದಲ್ಲಿ ಈ ದಾಳಿ ನಡೆದಿದ್ದು, 25 ಕೆ.ಜಿ ತೂಕದ ಸುಮಾರು 200 ಕ್ಕೂ ಹೆಚ್ಚು ಅಕ್ಕಿ ಪಾಕೇಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ..
ಗಂಗಾವತಿ ನಗರದ ಕಿಲ್ಲಾ ಏರಿಯಾದಲ್ಲಿ ಇರೋ ರಾಜಾಸಾಬ ಎನ್ನುವವರ ಮನೆಯಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿಡಲಾಗಿತ್ತು..ಇನ್ನೂ ಬಡವರಿಗೆ ಉಚಿತವಾಗಿ ವಿತರಿಸಲು ಇರುವ ಪಡಿತರ ದಾಸ್ತಾನನ್ನು ಖಚಿತ ಮಾಹಿತಿ ಮೇರೆಗೆ ಕೊಪ್ಪಳ ಎಸಿ ನಾರಯಣರಡ್ಡಿ ಕನಕರಡ್ಡಿಯವರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.. ಈ ಕುರಿತಂತೆ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Please follow and like us:
error