ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ


ಮಡಿಕೇರಿ ಮ:-ವಿರಾಜಪೇಟೆ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ 1977 ರನ್ವಯ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಡಿಕೇರಿಯಲ್ಲಿ ಸ್ವೀಕರಿಸಲಾಗುವುದು. ಜುಲೈ 24 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಷರತ್ತುಗಳು: ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬಾರ್ ಅಸೋಸಿಯೇಷನ್‍ನಲ್ಲಿ ನೋಂದಾಯಿಸಿರಬೇಕು, ಅಭ್ಯರ್ಥಿಯು ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು, ಸರ್ಕಾರಿ ನೌಕರರಾಗಿರಬಾರದು, ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಯಲ್ಲಿರಬಾರದು, ಯಾವುದೇ ನಿಗಮ, ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Please follow and like us:
error

Related posts