ಅವೈಜ್ಞಾನಿಕ ಕರ್ಪ್ಯೂ ಟೀಕೆ : ರಾತ್ರಿ ಕರ್ಪ್ಯೂ ಹಿಂಪಡೆದ ಸರಕಾರ

ಬೆಂಗಳೂರು , : ಕೋವಿಡ್ ತಡೆಗೆ ಹೇರಲು ನಿರ್ಧರಿಸಿದ್ದ ರಾತ್ರಿ ಕರ್ಪ್ಯೂ ಸರಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಪ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ , ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಪ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ . ಕರ್ಪ್ಯೂ ನಿರ್ಧಾರದ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು , ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಪ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು ಎಂದು ಸ್ಪಷ್ಟ ಪಡಿಸಿದ್ದಾರೆ . ನಿಯಮ ಪಾಲಿಸಿ : ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು , ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಪಾಡಿಕೊಂಡು , ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ .

Please follow and like us:
error