ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ದೂರು ಸಲ್ಲಿಸಲು ಸಹಾಯವಾಣಿ ಸ್ಥಾಪನೆ

ಕಲಬುರಗಿ : ಕರ್ನಾಟಕ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ದೂರುಗಳನ್ನು ಮತ್ತು ಕುಂದುಕೊರತೆಗಳನ್ನು ಸಾರ್ವಜನಿಕರು ಸಲ್ಲಿಸಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ತಿಳಿಸಿದ್ದಾರೆ.

ಚುನಾವಣಾಧಿಕಾರಿಗಳ ಕಚೇರಿಯಾದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕೊಠಡಿ ಸಂಖ್ಯೆ 17, ಎರಡನೇ ಮಹಡಿ ವಿಧಾನಸೌಧ, ಕಲಬುರಗಿ ಇಲ್ಲಿ ಸಹಾಯವಾಣಿ ಸ್ಥಾಪಿಸಿದ್ದು, ಸಂಖ್ಯೆ: 08472-278806 ಇರುತ್ತದೆ.

ಇನ್ನು ದೂರು ದಾಖಲಿಸಿಕೊಳ್ಳಲು ಪ್ರಾದೇಶಿಕ ಆಯುಕ್ತರ ಕಚೇರಿಯ ಶಿರಸ್ತೆದಾರ ಅಮಿತ್ ಕುಲಕರ್ಣಿ ಅವರನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಿದ್ದು, ಇವರ ಮೊಬೈಲ್ ಸಂಖ್ಯೆ 9916729555 ಇರುತ್ತದೆ

Please follow and like us:
error