ಈ ಭಾಗವನ್ನು ಕಲ್ಯಾಣದ ಕಡೆಗೆ ನಾವೆಲ್ಲರೂ ತೆಗೆದುಕೊಂಡು ಹೊಗೋಣ : ವಿಕಾಸ್ ಕಿಶೋರ್ ಸುರಳ್ಕರ್


ಕೊಪ್ಪಳ, : ಹೈದ್ರಾಬಾದ್ ಕರ್ನಾಟಕವನ್ನು ಸರ್ಕಾರವು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದು, ಈ ಭಾಗದ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಿ ಇದನ್ನು ಕಲ್ಯಾಣದ ಕಡೆಗೆ ತೆಗೆದುಕೊಂಡು ಹೋಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದರು.
 ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ನಡೆದ 73ನೇ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
 ಕಲ್ಯಾಣ ಕರ್ನಾಟಕ ಭಾಗವು ಹಿಂದುಳಿದಿದೆ ಎಂಬ ಹಣೆಪಟ್ಟಿಯನ್ನು ತೆಗೆದು ಹಾಕಲು ಸರ್ಕಾರವು ಈ ಭಾಗದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದ್ದು, ಅದರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಮ್ಮ ಕೆಲಸ ಕಾರ್ಯಗಳಲ್ಲಿ ನಡತೆಗಳನ್ನು ನಾವು ಬದಲಾಯಿಸಿಕೊಂಡು ಈ ಭಾಗದ ಅಭಿವೃದ್ಧಿಗೆ ಶ್ರಮಿಸೋಣ. ಸ್ವಾತಂತ್ರö್ಯದ ನಂತರ ಇಡೀ ಭಾರತಕ್ಕೆ ಸ್ವಾತಂತ್ರö್ಯ ಸಿಕ್ಕರೂ ಈ ಭಾಗಕ್ಕೆ ಸಿಕ್ಕಿರಲಿಲ್ಲ. ಅದನ್ನು ಪಡೆಯಲು ಈ ಭಾಗದ ಹಲವಾರು ಸ್ವಾತಂತ್ರö್ಯ ಸೇನಾನಿಗಳು ಮತ್ತು ಭಾರತದ ಅಂದಿನ ಗೃಹ ಮಂತ್ರಿಗಳು ಹಾಗೂ ಉಕ್ಕಿನ ಮನುಷ್ಯ ಎಂದೇ ಕರೆಯಲಾಗುತ್ತಿದ್ದ ಸರ್ದಾರ ವಲ್ಲಭಭಾಯಿ ಪಟೇಲ್‌ರವರ ಶ್ರಮದಿಂದ ಒಂದು ವರ್ಷದ ನಂತರ ಈ ಭಾಗಕ್ಕೆ ಸ್ವಾತಂತ್ರö್ಯ ದೊರಕಿತು ಎಂದರು.
 ನಾನು ಈ ಹಿಂದೆ ಯಾದಗಿರಿ, ಬೆಳಗಾವಿ ಹಾಗೂ ಇತರ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ನಮ್ಮ ಪೂರ್ವಜರು ಹಿಂದಿನ ದಿನಗಳಲ್ಲಿ ತಮ್ಮ ದೈನಂದಿನ ಉಪಯೋಗಕ್ಕಾಗಿ ಬಾವಿಗಳನ್ನು ತೆಗೆದು ಅವುಗಳ ಮುಖಾಂತರ ವರ್ಷದ 12 ತಿಂಗಳು ನೀರನ್ನು ಉಪಯೋಗಿಸುತ್ತಿದ್ದರು. ಆದರೆ ಇಂದು ನಾವುಗಳು ಇಷ್ಟೆಲ್ಲ ಮುಂದುವರೆದು ಕೊಳವೆ ಬಾವಿಗಳನ್ನು ಕೊರೆಸುತ್ತಿದ್ದರೂ ಸಹ ಇಂದಿನ ದಿನಮಾನಗಳಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂದು ಬಾವಿಗಳು ಕಾಣುತ್ತಿಲ್ಲ ಮತ್ತು ಬೋರ್‌ವೆಲ್‌ಗಳು ಕೊರೆದರು ಕೂಡ ನೀರಿನ ಅಭಾವ ಉಂಟಾಗುತ್ತಿದೆ. ಹಾಗಾಗಿ ನಾವು ಗಿಡ-ಮರಗಳನ್ನು ನೆಡುವುದರ ಮೂಲಕ ಪರಿಸರವನ್ನು ನಾವೆಲ್ಲರೂ ಇಂದು ಸಂರಕ್ಷಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿ.ಪಂ. ಉಪಕಾರ್ಯದರ್ಶಿ ಶರಣಬಸವ, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error