fbpx

ಎರಡು ಸಾವಿರ ಕೋಟಿ ಅವ್ಯವಹಾರ- ಸಿದ್ದರಾಮಯ್ಯ

ಬೆಂಗಳೂರು : ಕರೋನಾ ಹೆಸರಿನಲ್ಲಿ ರಾಜ್ಯ ಸರ್ಕಾರ ನಾಲ್ಕು ತಿಂಗಳಲ್ಲಿ 4,167 ಕೋಟಿ ಖರ್ಚು ಮಾಡಿದೆ . ಅದರಲ್ಲಿ ಎರಡು ಸಾವಿರ ಕೋಟಿ ಸಚಿವರು ಹಾಗೂ ಅಧಿಕಾರಿಗಳ ಜೇಬಿಗೆ ಹೋಗಿದೆ ಎಂದು ವಿ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. . ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ‘ ರಾಜ್ಯ ಸರ್ಕಾರ ಮಾಡಿರುವ ಪ್ರತಿ ಪೈಸೆ ಖರ್ಚಿನದೂ ಲೆಕ್ಕ ಕೊಡಬೇಕು . ಲೆಕ್ಕ ಕೇಳುವುದು ನಮ್ಮ ಹಕ್ಕು . ಇಲ್ಲದಿದ್ದರೆ ಜನರಿಗೆ ದ್ರೋಹ ಮಾಡಿದಂತೆ ಆಗುತ್ತದೆ ‘ ಎಂದರು . ‘ ಈ ಅವ್ಯವಹಾರದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ‘ ಎಂದು ಅವರು ಆಗ್ರಹಿಸಿದ್ದಾರೆ.

Please follow and like us:
error
error: Content is protected !!