ಎಲ್ಲಾ ಧರ್ಮದ ಜೊತೆ ಸಹೋದರ ಮನೋಭಾವತ್ವ ಹೊಂದಿದ ಶಿವಾಜಿ : ಕೆ. ರಾಘವೇಂದ್ರ ಹಿಟ್ನಾಳ

ಕೊಪ್ಪಳ ಫೆ.ೆ): ಛತ್ರಪತಿ ಶಿವಾಜಿ ಮಹಾರಾಜರು ಅಪ್ರತಿಮ ದೇಶಭಕ್ತರಾಗಿದ್ದು, ಎಲ್ಲಾ ಧರ್ಮದ ಜೊತೆ ಸಹೋದರ ಮನೋಭಾವತ್ವ ಹೊಂದಿದ್ದರು ಎಂದು ಕರ್ನಾಟಕ ಸರ್ಕಾರದ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದವರು.
ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದ ಸಾಹಿತ್ಯ ಭವನದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಛತ್ರಪತಿ ಶಿವಾಜಿ ಮಹಾರಾಜರು ಚಿಕ್ಕ ವಯಸ್ಸಿನಲ್ಲಿಯೇ ದೇಶಾಭಿಮಾನ ಬೆಳೆಸಿಕೊಂಡಿದ್ದರು. ಬಾಲ್ಯದಲ್ಲಿಯೇ ಸೈನ್ಯವನ್ನು ಕಟ್ಟಿದಂತಹ ಕೀರ್ತಿ ಶಿವಾಜಿಯದ್ದು. ಬಾಲ್ಯದಿಂದಲೇ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ತನ್ನ ಉತ್ತಮ ಸೈನ್ಯದೊಂದಿಗೆ ಅನೇಕ ರಾಜ್ಯಗಳನ್ನು ವಶಪಡಿಸಿಕೊಂಡಿದ್ದ ಕೀರ್ತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ. ತಂದೆ-ತಾಯಿಯ ಆಶ್ರಯದಲ್ಲಿ ಬೆಳೆದು ಗುರು ರಾಮದಾಸ್ ಅವರ ಮಾರ್ಗದರ್ಶನವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಅಪ್ರತಿಮ ದೇಶಭಕ್ತರಾಗಿ ಮೇರೆದಿದ್ದಾರೆ. ಮಹಾನ್ ರಾಜರಾಗಿ ದೇಶಕ್ಕಾಗಿ ನೀಡಿದ ಶಿವಾಜಿ ಮಹಾರಾಜರ ಕೊಡುಗೆಗಳ ಅಪಾರವಾಗಿವೆ. ಇಂತಹ ದೇಶಪ್ರೇಮಿ ಹಾಗೂ ಅಪ್ರತಿಮ ಹೋರಾಟಗಾರರ ವ್ಯಕ್ತಿತ್ವವನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು. ಶಿವಾಜಿ ಸಮುದಾಯ ಭವನಕ್ಕೆ 10 ಲಕ್ಷ ಅನುದಾನವನ್ನು ಶಾಸಕರ ನಿದಿಯಿಂದ ನೀಡಲಾಗುವುದು. ಸಣ್ಣ-ಸಣ್ಣ ಸಮುದಾಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ರೂ. 137 ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಶಿಕ್ಷಣವು ಜ್ಯೋತಿ ಇದ್ದ ಹಾಗೇ, ಆದ್ದರಿಂದ ಮಕ್ಕಳ ಶಿಕ್ಷಣಕ್ಕೆ ಎಲ್ಲರೂ ಹೆಚ್ಚಿನ ಆಧ್ಯತೆ ನೀಡಿ. ಕ್ಷತ್ರೀಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಮಾಜದ ಭೇಡಿಕೆಯಾಗಿದ್ದು, ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಭರವಸೆ ನೀಡಿದರು.
ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಗಜೇಂದ್ರಗಡದ ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜು ವಸಂತರಾವ್ ಗಾರಗಿ ಅವರು ವಿಶೇಷ ಉಪನ್ಯಾಸ ನೀಡಿ, ಛತ್ರಪತಿ ಶಿವಾಜಿ ಮಹಾರಾಜರು ಸ್ವರಾಜ್ಯ ಕಲ್ಪನೆಯ ರೂವಾರಿಯಾಗಿದ್ದರು. ಬಾಲ್ಯದಲ್ಲಿ ಶಿವಾಜಿಗೆ ರಾಮಾಯಣ, ಮಹಾಭಾರತ ಭೋದಿಸಿದ ಮಾತೆ ಜೇಜಾಬಾಯಿ ಅವರು ಛತ್ರಪತಿಗೆ ಉತ್ತಮ ವ್ಯಕ್ತಿತ್ವ ರೂಪಿಸುವ ಶಕ್ತಿಯಾಗಿದ್ದರು. ಶಿವಾಜಿಯು ದೇಶ ಪ್ರೇಮ, ಧಾರ್ಮಿಕ, ಸಾಮಾಜಿಕ, ಸಮಾನತೆ, ಪರಂಪರೆಯನ್ನು ಸಹ ಬೆಳಸಿದ್ದಾರೆ. ಶಿವಾಜಿಯು ರಾಷ್ಟ್ರದ ಪ್ರತಿಯೊಬ್ಬ ಯುವಕರಿಗೂ ದೇಶಪ್ರೇಮ ಬಿಂಬಿಸುವ ಪ್ರತೀಕ. ತನ್ನ ಜೀವಿತಾವಧಿಯ 53 ವರ್ಷಗಳಲ್ಲಿ ಸುವಾರು ನಾಲ್ಕು ದಶಕಗಳಿಗೂ ಅಧಿಕ ಆಡಳಿತವನ್ನೇ ನಡೆಸಿದ್ದಾರೆ. ಶಿವಾಜಿ ತಮ್ಮ ಆಡಳಿತದಲ್ಲಿ ಎಲ್ಲರಿಗೂ ಸಮಾನ ನ್ಯಾಯ ಒದಗಿಸಿದ್ದಾರೆ. ಮಾತೆ ಜೇಜಾಬಾಯಿ ಅವರು ಶಿವಾಜಿಗೆ ನೀಡಿದ ಆದರ್ಶಗಳನ್ನು ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ನೀಡಿ, ಶಿವಾಜಿ ಮಹಾರಾಜರಂತಹ ತಮ್ಮ ಮಕ್ಕಳ ವ್ಯಕ್ತಿತ್ವ ರೂಪಿಸಬೇಕು. ಎಲ್ಲರೂ ಶಿವಾಜಿ ಮಹಾರಾಜರಂತೆ ಸ್ವಾಭಾವ ಬೆಳಸಿಕೊಳ್ಳಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರರಿಗೆ ಎರಡು ನಿಮಿಷಗಳ ಕಾಲ ಮೌನ ಆಚರಿಸಿ ಗೌರವವನ್ನು ಸಲ್ಲಿಸಲಾಯಿತು. ಸಭಾರಂಭದಲ್ಲಿ ಸಮಾರಂಭದಲ್ಲಿ ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ನಗರಸಭೆ ಸದಸ್ಯರಾದ ಅಮಜದ್ ಪಟೇಲ್, ಮುತ್ತುರಾಜ ಕುಷ್ಟಗಿ, ಬಸಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ದೇಸಾಯಿ, ಸ್ವಾತಂತ್ರ್ಯ ಯೋಧರಾದ ಸುಮಂತರಾವ ಪಟವಾರಿ, ಮುಖಂಡರಾದ ರಮೇಶ ಸುರ್ವೆ, ನಾಗೇಶ ಬಡಿಗೇರ, ಮಾರುತಿ ಕಾರಟಗಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ಅಶೋಕ ವೃತ್ತ, ಜವಾಹರ ರಸ್ತೆ, ಗಡಿಯಾರ ಕಂಭ ಮಾರ್ಗವಾಗಿ ತುಳಜಾಭವಾನಿ ದೇವಸ್ಥಾನದವರೆಗೆ ವಿಜ್ರಂಭಣೆಯಿಂದ ಜರುಗಿತು. ಮೇರವಣಿಗೆಯಲ್ಲಿ ಕಲಾ ತಂಡಗಳು, ಕುಂಬ ಹೊತ್ತ ಮಹಿಳೆಯರು ಭಾಗವಹಿಸಿ, ಮೇರವಣಿಗೆಯನ್ನು ಆಕರ್ಷಕಗೊಳಿಸಿದರು.

Please follow and like us:
error