ಎಸ್ಸಿ – ಎಸ್ಟಿ ನೌಕರರಿಗೆ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು , ಜ . 30 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ( ಎಸ್ಸಿ – ಎಸ್ಟಿ ) ನೌಕರರಿಗೆ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ . ಬುಧವಾರ ವಿಧಾನಸೌಧದ ಸಂಪುಟ ಸಭಾ ಮಂದಿರದಲ್ಲಿ ಸಿಎಂ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು . ಕರ್ನಾಟಕ ( ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ) ಮೀಸಲಾತಿ ಆಧಾರದ ಮೇಲೆ ಭಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮದ ಜೇಷ್ಠತೆಯನ್ನು ವಿಸ್ತರಿಸುವ ಅಧಿನಿಯಮ – 2017ನ್ನು ಜಾರಿಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ . ವಿಧಾನ ಮಂಡಲ ಉಭಯ ಸದನಗಳಲ್ಲಿ ಅಂಗೀಕೃತವಾಗಿದ್ದ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ ಎಂದು ಹೇಳಿದರು . ಸುಪ್ರೀಂ ಕೋರ್ಟಿನ ಅಂತಿಮ ತೀರ್ಪಿಗೆ ಒಳಪಟ್ಟು ಪರಿಶಿಷ್ಟ ನೌಕರರ ಮುಂಭಡ್ತಿ ಮೀಸಲು ಕಾಯ್ದೆ ಜಾರಿಗೊಳಿಸಲಾಗುತ್ತದೆ.

ಸುಪ್ರೀಂ ಕೋರ್ಟಿನ ಅಂತಿಮ ತೀರ್ಪಿಗೆ ಒಳಪಟ್ಟು ಪರಿಶಿಷ್ಟ ನೌಕರರ ಮುಂಭಡ್ತಿ ಮೀಸಲು ಕಾಯ್ದೆ ಜಾರಿಗೊಳಿಸಲಾಗುತ್ತದೆ . ಫೆಬ್ರವರಿ 5 , 6 , 7ಕ್ಕೆ ಈ ಪ್ರಕರಣದ ವಿಚಾರಣೆಗೆ ಬರಲಿದೆ ಎಂದ ಅವರು , ಶೀಘ್ರವೇ ಜೇಷ್ಠತಾ ಪಟ್ಟಿಯನ್ನು ತಯಾರಿಸಿ ನಿಯಮಾವಳಿಗಳ ಅನ್ವಯ ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೊಳಿಸಲಾಗಿದೆ ಎಂದರು . ಸುಪ್ರೀಂ ಕೋರ್ಟ್‌ನಲ್ಲಿ ಸರಕಾರದ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಮುಕುಲ್ ರೋಟಗಿ | ಭಡ್ತಿ ಮೀಸಲು ಕಾಯ್ದೆ ಜಾರಿ ಮಾಡಲೇಬೇಕೆಂದು ಲಿಖಿತ ಅಭಿಪ್ರಾಯ ನೀಡಿದ್ದಾರೆ . ಅಲ್ಲದೆ , ಈ ವಿಚಾರವನ್ನು ಕೋರ್ಟಿನ ಗಮನಕ್ಕೂ ತಂದಿದ್ದಾರೆ ಎಂದು ಹೇಳಿದರು . ಪರ – ವಿರೋಧ ಮುಖ್ಯವಲ್ಲ : ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ವಿಚಾರದಲ್ಲಿ ಕಾನೂನು ಅನುಷ್ಟಾನ ಮುಖ್ಯ . ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ – ವಿರೋಧ ಸಹಜ . ಅನುಕೂಲ , ಅನಾನುಕೂಲದ ಪ್ರಶ್ನೆ ಉದ್ಭವಿಸುವುದಿಲ್ಲ . ತೊಂದರೆಯಾಗದಂತೆ ಕಾನೂನು ಜಾರಿಗೆ ಸರಕಾರ ಕ್ರಮ ವಹಿಸಲಿದೆ ಎಂದರು . ಭಡ್ತಿ ಮೀಸಲಾತಿ ಕಾಯ್ದೆ ಜಾರಿಯಿಂದ ಯಾವುದೇ ನ್ಯಾಯಾಂಗ ನಿಂದನೆಯೂ ಆಗುವುದಿಲ್ಲ . ಪರ – ವಿರೋಧ ಪ್ರಜಾಪ್ರಭುತ್ವ ವ್ಯವಸ್ಥೆ ಲಕ್ಷಣ ಎಂದು ಸಮರ್ಥಿಸಿದ್ದಾರೆ.

ಪರ – ವಿರೋಧ ಪ್ರಜಾಪ್ರಭುತ್ವ ವ್ಯವಸ್ಥೆ ಲಕ್ಷಣ ಎಂದು ಸಮರ್ಥಿಸಿದ ಅವರು , ಕೋರ್ಟ್ ತೀರ್ಪಿನಿಂದ ಹಿಂಭಡ್ತಿಯಾಗಿರುವ ನೌಕರರಿಗೆ ಹಿಂದಿನ ವೇತನವನ್ನೇ ನೀಡುತ್ತಿದ್ದು , ಕಾಯ್ದೆ ಜಾರಿಯಿಂದ ಯಾವುದೇ ಹೊರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು . ಪರಿಶಿಷ್ಟ ನೌಕರರ ಸಂಭ್ರಮ : ಭಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಂಪುಟ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ , ಉಪ ಮುಖ್ಯಮಂತ್ರಿ ಡಾ . ಜಿ . ಪರಮೇಶ್ವರ್‌ ಹಾಗೂ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಕಚೇರಿಗೆ ತೆರಳಿ ಸಿಹಿ ಹಂಚಿ ಪರಿಶಿಷ್ಟ ನೌಕರರು ಸಂಭ್ರಮಿಸಿದರು

Please follow and like us:
error